ವಿದ್ಯಾರ್ಥಿ ಮುಖಂಡನ ಸಾವು: ಕೊಲ್ಕತಾದಲ್ಲಿ ಭಾರಿ ಪ್ರತಿಭಟನೆ

ಕೊಲ್ಕತಾ: ನಿನ್ನೆ ಪೊಲೀಸ್ ಠಾಣೆಯಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿ ಮುಖಂಡನ ಸಾವನ್ನು ಖಂಡಿಸಿ ಬುಧವಾರ ಕೊಲ್ಕತಾದಲ್ಲಿ ಸಿಪಿಐ(ಎಂ) ಕಾರ್ಯಕರ್ತರು ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕೊಲ್ಕತಾದಲ್ಲಿರುವ ಸಿಪಿಐ(ಎಂ) ಕಚೇರಿ ಎದುರು ಮೃತ ಮುಖಂಡ ಸುದೀಪ್ ಗುಪ್ತಾನ ಶವವನ್ನು ಇರಿಸಿ ಪ್ರತಿಭಟನೆ ನಡೆಸುತ್ತಿರುವ ಕಾರ್ಯಕರ್ತರು, ತಪ್ಪಿತಸ್ಥ ಪೊಲೀಸರನ್ನು ಅಮಾನತುಗೊಳಿಸಿ ಅವರ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸುತ್ತಿದ್ದಾರೆ.
'ಸುದೀಪ್ ತಲೆಗೆ ಪೊಲೀಸರು ಬಲವಾಗಿ 2-3 ಸಾರಿ ಹೊಡೆದಿದ್ದರಿಂದಲೇ ಆತ ಸಾವನ್ನಪ್ಪಿದ್ದಾನೆ. ಪೊಲೀಸರು ಬೇಕೆಂದೇ ಆತನಿಗೆ ಬಲವಾಗಿ ಹೊಡೆದಿದ್ದಾರೆ' ಎಂದು ವಿದ್ಯಾರ್ಥಿಗಳು ಆರೋಪಿಸುತ್ತಿದ್ದಾರೆ. ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಓಲೈಸಲು ಸ್ವತಃ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಧಾವಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವ ಆಶ್ವಾಸನೆ ನೀಡಿದ್ದಾರೆ.
'ವಿದ್ಯಾರ್ಥಿ ಮುಖಂಡನ ಸಾವು ದುರದೃಷ್ಟಕರ. ಮೃತ ಸಂದೀಪ್ ಗುಪ್ತಾ ಅವರ ಕುಟುಂಬಕ್ಕೆ ಸರ್ಕಾರದಿಂದ ಸಕಲ ನೆರವು ದೊರೆಯುವಂತೆ ನಾನು ನೋಡಿಕೊಳ್ಳುತ್ತೇನೆ. ತಪ್ಪಿತಸ್ಥ ಅಧಿಕಾರಿಗಳಿಗೆ ಕ್ಷಮೆಯೇ ಇಲ್ಲ. ವಿರೋಧ ಪಕ್ಷಗಳು ಇದರಲ್ಲಿಯೂ ರಾಜಕೀಯ ಮಾಡುತ್ತಿರುವುದು ಸರಿಯಲ್ಲ' ಎಂದು ಮಮತಾ ಕಿಡಿಕಾರಿದರು.
ಪ್ರಕರಣವೊಂದರ ಸಂಬಂಧ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ವಿದ್ಯಾರ್ಥಿ ಮುಖಂಡ ಸಂದೀಪ್ ಗುಪ್ತಾ ಅವರು ನಿನ್ನೆ ಸಂಜೆ ಪೊಲೀಸ್ ಠಾಣೆಯಲ್ಲಿಯೇ ಸಾವನ್ನಪ್ಪಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ವಿದ್ಯಾರ್ಥಿ ಸಂಘಟನೆಗಳು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದವು. ಅಂದೇ ಕೊಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಐಪಿಎಲ್ 6ನ ಉದ್ಘಾಟನಾ ಸಮಾರಂಭ ಏರ್ಪಾಡಾಗಿತ್ತು. ಸಮಾರಂಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪಾಲ್ಗೊಂಡಿದ್ದರು. ಇದು ವಿರೋಧ ಪಕ್ಷಗಳ ಟೀಕೆಗೆ ಕಾರಣವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


