'ಕೈ' ಪ್ರತಿಭಟನೆಗೆ ಕಾರ್ಯಕರ್ತ ಬಲಿ

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಫೈಟ್ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರ ಪ್ರತಿಭಟನೆಗೆ ಗುರುವಾರ ವ್ಯಕ್ತಿಯೋರ್ವ ಬಲಿಯಾಗಿದ್ದಾನೆ.
ಕೈ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಇಂದು ಓರ್ವ ಬೆಂಬಲಿಗ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯ ಮುಂಬಾಗದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದು ತಾರಕಕ್ಕೇರಿದ್ದು, ಬೆಂಬಲಿಗರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು. ಈ ವೇಳೆ ನೂಕು ನುಗ್ಗಲು ಉಂಟಾಗಿ ಮಹದೇವಪುರದ ವೇಲನ್ (48) ಎಂಬ ಕಾರ್ಯಕರ್ತ ಹೃದಯಾಘಾತಕ್ಕೆ ಒಳಗಾಗಿದ್ದಾನೆ.
ವೇಲನ್ ರನ್ನು ತಕ್ಷಣವೇ ಸಮೀಪದ ಮಹಾವೀರ್ ಜೈನ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವೇಲನ್ ಸಾವನ್ನಪ್ಪಿದ್ದಾರೆ. ಆದರೆ ಕೆಲ ಕಿಡಿಕೇಡಿಗಳು ಪೊಲೀಸರ ಲಾಠಿ ಪ್ರಹಾರದಿಂದಾಗಿಯೇ ವೇಲನ್ ಮೃತಪಟ್ಟಿದಾರೆ ಎಂದು ಗುಲ್ಲೆಬ್ಬಿಸಿದ್ದಾರೆ. ಕಿಡಿಗೇಡಿಗಳ ಕೃತ್ಯದಿಂದಾಗಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಆದರೆ ಪ್ರತ್ಯಕ್ಷದರ್ಶಿಗಳ ಪ್ರಕಾರ ವೇಲನ್ ಪೊಲೀಸ್ಲಾಠಿ ಪ್ರಹಾರದಿಂದಾಗಿ ಮೃತಪಟ್ಟಿಲ್ಲ. ಬದಲಿಗೆ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಈ ಹಿಂದೆಯೂ ಕೂಡ ವೇಲನ್ ಗೆ ಹೃದಯಾಘಾತವಾಗಿತ್ತು ಎಂದು ತಿಳಿದು ಬಂದಿದೆ. ಮೃತ ವೇಲನ್ ಮೂಲತಃ ಮಹಾದೇವಪುರದವನು. ಮಹಾದೇವಪುರದ ಕಾಂಗ್ರೆಸ್ ಮುಖಂಡ ನಲ್ಲೂರಳ್ಳಿ ನಾಗೇಶ್ ಅವರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ ನಾಗೇಶ್ ಬೆಂಬಲಿಗರು ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದರು. ಇದೇ ಗುಂಪಿನಲ್ಲಿಯೇ ವೇಲನ್ ಇದ್ದರು ಎಂದು ತಿಳಿದು ಬಂದಿದೆ.
ಸಾವು ದುರ್ಧೈವದ ಸಂಗತಿ: ವೀರಣ್ಣ ಮತ್ತಿಕಟ್ಟಿ
ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವೀರಣ್ಣ ಮತ್ತಿಕಟ್ಟಿ, ಪ್ರತಿಭಟನೆಯಲ್ಲಿ ಕಾರ್ಯಕರ್ತ ಸಾವನ್ನಪ್ಪಿರುವುದು ದುರ್ಧೈವದ ಸಂಗತಿ. ಕಾಂಗ್ರೆಸ್ ಪಕ್ಷ ಎಲ್ಲ ಕ್ಷೇತ್ರಗಳಿಗೂ ಅರ್ಹ ಅಭ್ಯರ್ಥಿಗಳನ್ನೇ ಆರಿಸಲಿದೆ. ಆದರೆ ಟಿಕೆಟ್ಗಾಗಿ ಕಾರ್ಯಕರ್ತರು ಪ್ರತಿಭಟನೆ ನಡೆಸುವುದು ಒಳ್ಳೆಯ ಪರಂಪರೆಯಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


