ವರದಕ್ಷಿಣೆ ಕಿರುಕುಳ: ಮಾಜಿಮಂತ್ರಿ ಮಗನಿಗೆ ಜಾಮೀನು
ಭುವನೇಶ್ವರ್: ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಬಂಧಿತನಾಗಿದ್ದ ಓಡಿಸ್ಸಾದ ಮಾಜಿ ಮಂತ್ರಿ ರಘುನಾಥ್ ಮೊಹಂತಿಯವರ ಪುತ್ರ ರಾಜಾಶ್ರೀ ಮೊಹಂತಿಗೆ ಜಿಲ್ಲಾ ಸೆಷನ್ಸ್ ಕೋರ್ಟ್ ಶುಕ್ರವಾರ ಷರತ್ತು ಬದ್ಧ ಜಾಮೀನು ನೀಡಿದೆ.
ಬಾಲಸುರೆ ಜಿಲ್ಲಾ ಸೆಷನ್ಸ್ ಕೋರ್ಟ್‌ನ ನ್ಯಾಯಾಮೂರ್ತಿ ವಿ. ಜಯಶ್ರೀ ಅವರು, ರಾಜಾಗೆ ಷರತ್ತು ಬದ್ಧ ಜಾಮೀನು ನೀಡಿದ್ದು, ಯಾವುದೇ ಕಾರಣಕ್ಕೂ ನ್ಯಾಯಾಲಯದ ಒಪ್ಪಿಗೆ ಇಲ್ಲದೆ ರಾಜ್ಯ ಬಿಟ್ಟು ಹೋಗಬಾರದು. ಪೊಲೀಸರ ತನಿಖೆಗೆ ಸಹಕರಿಸಬೇಕೆಂದು ಆದೇಶಿಸಿದ್ದಾರೆ ಎಂದು ಆರೋಪಿ ಪರ ವಕೀಲ ಗೌರಿ ಕುಮಾರ್ ಬರಿಕ್ ತಿಳಿಸಿದ್ದಾರೆ.
ರಾಜಾಶ್ರೀ ಅವರು ಜೂನ್ 2012ರಲ್ಲಿ ನನ್ನನ್ನು ಮದುವೆಯಾಗಿದ್ದರು. ಅಲ್ಲಿಂದ ಇಲ್ಲಿಯ ತನಕ ನನಗೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಅವರ ಪತ್ನಿ ಬರ್ಸಾ ಸೌನ್ನಿ ಚೌದರಿ ಬಾಲಸುರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ವರದಕ್ಷಿಣೆ ವಿಷಯವಾಗಿ ಮದುವೆ ಸಮಯದಲ್ಲಿ ನನ್ನ ತಂದೆ 10 ಲಕ್ಷ ನಗದು ನೀಡಿದ್ದರು. ಆದರೆ ಅದಕ್ಕೆ ತೃಪ್ತರಾಗದ ನನ್ನ ಪತಿ 25 ಲಕ್ಷ ತರುವಂತೆ ಒತ್ತಾಯಿಸುತ್ತಿದ್ದರು. ನನ್ನ ಮಾವ, ಅತ್ತೆ ಹಾಗೂ ನಾದಿನಿ ಸೇರಿ ನನ್ನ ಮೇಲೆ ದೌರ್ಜನ್ಯ ನಡೆಸುತ್ತಿದ್ದರು ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಈ ದೂರಿನನ್ವಯ ಮಾರ್ಚ್ 17ರಂದು ರಾಜಾಶ್ರೀಯನ್ನು ಪೊಲೀಸರು ಬಂಧಿಸಿದ್ದರು.
ಇಂದು ರಾಜಾಶ್ರೀ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ಸೆಷನ್ಸ್ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

