ಈಗಿನ ಸುದ್ದಿ

ಕೇಜ್ರಿವಾಲ್ ಉಪವಾಸ ಅಂತ್ಯ

ಕೇಜ್ರಿವಾಲ್ ಉಪವಾಸ ಅಂತ್ಯ
Published On :

ನವದೆಹಲಿ: ಕಳೆದ 2 ವಾರಗಳಿಂದ ಉಪವಾಸ ಸತ್ಯಾಗ್ರಹ ಕುಳಿತಿದ್ದ ಸಾಮಾಜಿಕ ಕಾರ್ಯಕರ್ತ ಮತ್ತು ಆಮ್ ಆದ್ಮಿ ಪಕ್ಷದ ಸ್ಥಾಪಕ ಅರವಿಂದ್ ಕೇಜ್ರಿವಾಲ್ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.

ನೀರು ಮತ್ತು ವಿದ್ಯುತ್ ದರವನ್ನು ಏರಿಕೆ ಮಾಡಿದ್ದ ದೆಹಲಿ ಕಾಂಗ್ರೆಸ್ ಸರ್ಕಾರದ ನಿಲುವನ್ನು ಖಂಡಿಸಿ ಉಪವಾಸ ಸತ್ಯಾಗ್ರಹ ಕುಳಿತಿದ್ದ ಕೇಜ್ರಿವಾಲ್, ವೈದ್ಯರ ಒತ್ತಾಯದ ಮೇರೆಗೆ ತಮ್ಮ 15 ದಿನಗಳು ಉಪವಾಸ ಸತ್ಯಾಗ್ರಹವನ್ನು ಇಂದು ಅಂತ್ಯಗೊಳಿಸಿದ್ದಾರೆ. ಆಮ್ ಆದ್ಮಿ ಕಾರ್ಯಕರ್ತ ತಂದು ಕೊಟ್ಟ ಜ್ಯೂಸ್ ಸೇವಿಸುವುದರ ಮೂಲಕ ಕೇಜ್ರಿವಾಲ್ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದರು.

ಇದಕ್ಕೂ ಮೊದಲು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, 'ನನಗೆ ಸಕ್ಕರೆ ಖಾಯಿಲೆ ಇದೆ. ನಾನು ಉಪವಾಸ ಆರಂಭಿಸುವ ಮುನ್ನವೇ ನನಗೆ ವೈದ್ಯರು 2 ದಿನಕ್ಕಿಂತಲೂ ಅಧಿಕವಾಗಿ ಉಪವಾಸ ಮಾಡಬಾರದು ಎಂದು ಎಚ್ಚರಿಸಿದ್ದರು. ಆದರೆ 15 ದಿನಗಳಾದರೂ ನಾನು ಬದುಕಿದ್ದೇನೆ. ಜನರ ಆಶೀರ್ವಾದದಿಂದಾಗಿ ನನ್ನ ಉಪವಾಸ 15 ದಿನಗಳವರೆಗೆ ವಿಸ್ತರಿಸಿದೆ. ಈ ಮೂಲಕ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ಎಚ್ಚರಿಕೆ ರವಾನೆಯಾಗಿದೆ ಎಂದು ನಾನು ಭಾವಿಸುತ್ತೇನೆ'.

'ಮುಂಬರುವ 2014ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ನಮ್ಮ ಆಮ್ ಆದ್ಮಿ ಪಕ್ಷ ಕಠಿಣ ಸಾವಲೆಸೆಯಲಿದೆ. ನೀರು ಮತ್ತು ವಿದ್ಯುತ್ ದರ ಏರಿಕೆ ಮುಂದಿಟ್ಟುಕೊಂಡು ದೆಹಲಿಯಲ್ಲಿ ಹೋರಾಟ ಆರಂಭಿಸುತ್ತೇನೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಕಾಂಗ್ರೆಸ್ ಉದ್ಯಮಶಾಹಿಗಳೊಂದಿಗೆ ಕೈಜೋಡಿಸಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಇವುಗಳನ್ನು ಖಂಡಿಸಬೇಕಿದ್ದ ಬಿಜೆಪಿ ಸತ್ವಹೀನವಾಗಿದೆ' ಎಂದು ಕೇಜ್ರಿವಾಲ್ ಖಂಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.