ರಾಜಾಭಯ್ಯಾ ವಿರುದ್ಧ ಮತ್ತೊಂದು ಕೇಸ್
ಲಖನೌ: ಡಿವೈಎಸ್ಪಿ ಹತ್ಯೆ ಪ್ರಕರಣದಲ್ಲಿ ಸಚಿವ ಸ್ಥಾನ ಕಳೆದುಕೊಂಡ ಉತ್ತರಪ್ರದೇಶದ ಮಾಜಿ ಸಚಿವ ರಘರಾಜ್ ಪ್ರತಾಪ್ ಸಿಂಗ್ ಅಲಿಯಾಸ್ ರಾಜಾಭಯ್ಯಾ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.
ಡಿವೈಎಸ್ಪಿ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿರುವ ದಿವಾಕರ್ ತ್ರಿಪಾಠಿ ಎಂಬ ವ್ಯಕ್ತಿಗೆ ರಾಜಾಭಯ್ಯಾ ಕೊಲೆ ಬೆದರಿಕೆ ಹಾಕಿರುವ ಕುರಿತು ಪ್ರತಾಪ್ಗಡ ಜಿಲ್ಲೆಯ ಸಂಗ್ರಾಮ್ ಗಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ದಿವಾಕರ್ ತ್ರಿಪಾಠಿ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ರಾಜಾಭಯ್ಯಾ ವಿರುದ್ಧ ಸಾಕ್ಷಿ ಹೇಳದಂತೆಯೂ ಮತ್ತು ಸಾಕ್ಷಿ ಹೇಳಿದರೆ ತನ್ನನ್ನು ಕೊಲ್ಲುವುದಾಗಿಯೂ ಬೆದರಿಕೆ ಹಾಕಿದರು ಎಂದು ತಿಳಿಸಿದ್ದಾರೆ.
ಕೊಲೆ ಬೆದರಿಕೆ ದೂರು ದಾಖಲಿಸಿಕೊಂಡಿರುವ ಸಂಗ್ರಾಮ್ ಗಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಲ್ಲದೆ ಅಪರಿಚಿತರು ಬಂದಿದ್ದ ಬೈಕಿನ ನಂಬರ್ ಅನ್ನು ಸಮೀಪದ ಎಲ್ಲ ಪೊಲೀಸ್ ಠಾಣೆಗಳಿಗೆ ರವಾನಿಸಿ ಮಾಹಿತಿ ಕೇಳಿದ್ದೇವೆ ಎಂದು ಸ್ಥಳೀಯ ಪೊಲೀಸರೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ನಡುವೆ ಕಳೆದ ರಾತ್ರಿ ಮಾಜಿ ಸಚಿವ ರಾಜಾಭಯ್ಯಾ ಅವರು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು ಅರ್ಧ ಗಂಟೆಗೂ ಅಧಿಕ ಸಮಯ ಅಖಿಲೇಶ್ ಯಾದವ್ ಅವರೊಂದಿಗೆ ಚರ್ಚಿಸಿದ ರಾಜಾಭಯ್ಯಾ, ಪ್ರಕರಣದಲ್ಲಿ ತಮ್ಮ ಕೈ ವಾಡವಿಲ್ಲವೆಂದು ಸ್ಪಷ್ಟಪಡಿಸಲು ಪ್ರಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಒಟ್ಟಾರೆ ಡಿವೈಎಸ್ಪಿ ಜಿಯಾ ಉಲ್ ಹಕ್ ಹತ್ಯೆ ಪ್ರಕರಣ ರಾಜಾಭಯ್ಯಾ ಅವರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಪ್ರಕರಣದಿಂದ ತಪ್ಪಿಸಿಕೊಳ್ಳಲು ರಾಜಾಭಯ್ಯಾ ಮಾಡುತ್ತಿರುವ ಪ್ರಯತ್ನಗಳು ರಾಜಾಭಯ್ಯಾ ಅವರಿಗೇ ಉಲ್ಟಾ ಹೊಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

