ಈಗಿನ ಸುದ್ದಿ

ಟಿಕೆಟ್ ನೀಡದಿದ್ದರೆ ರಾಜಿನಾಮೆ: ವೈ.ನಾಗಪ್ಪ ಎಚ್ಚರಿಕೆ

Published On :

ದಾವಣಗೆರೆ: ಕಾಂಗ್ರೆಸ್ ಇನ್ನೆರಡು ದಿನದಲ್ಲಿ ತಮಗೆ ಟಿಕೆಟ್ ನೀಡದಿದ್ದರೆ ಪಕ್ಷಕ್ಕೆ ರಾಜಿನಾಮೆ ಕೊಡುವುದಾಗಿ ಮಾಜಿ ಸಚಿವ ವೈ. ನಾಗಪ್ಪ ಅವರು ಹೇಳಿದ್ದಾರೆ.

ದಾವಣೆಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ನಾಗಪ್ಪ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಟಿಕೆಟ್ ಹಂಚಿಕೆ ಬಗ್ಗೆ ತಮಗೆ ತೀವ್ರ ಅಸಮಾಧಾನವಿದ್ದು, ಹರಿಹರದಲ್ಲಿ ತಮಗೇ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಟಿಕೆಟ್ ಘೋಷಣೆಯಾಗದಿದ್ದರೆ ಮುಂದಿನ ದಾರಿ ನೋಡಿಕೊಳ್ಳುವುದಾಗಿ ನಾಗಪ್ಪ ತಿಳಿಸಿದ್ದಾರೆ.

ಶುಕ್ರವಾರ ಸಂಜೆ ತಮ್ಮ 170 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಪಕ್ಷ, ಹರಿಹರ ಕ್ಷೇತ್ರದಿಂದ ರಾಮಪ್ಪ ಅವರನ್ನು ಕಣಕ್ಕಿಳಿಸಿತ್ತು. ರಾಮಪ್ಪ ಅವರಿಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿ ವೈ.ನಾಗಪ್ಪ ಅವರ ಬೆಂಬಲಿಗರು ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ಇದೀಗ ಸ್ವತಃ ವೈ.ನಾಗಪ್ಪ ಅವರೇ ತಮಗೆ ಟಿಕೆಟ್ ನೀಡಬೇಕು ಆಗ್ರಹಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.