ಈಗಿನ ಸುದ್ದಿ

ದೇಶ ತೊರೆಯದಂತೆ ಮುಷರಫ್‌ಗೆ 'ಸುಪ್ರೀಂ' ಎಚ್ಚರಿಕೆ

ದೇಶ ತೊರೆಯದಂತೆ ಮುಷರಫ್‌ಗೆ 'ಸುಪ್ರೀಂ' ಎಚ್ಚರಿಕೆ
Published On :

ಇಸ್ಲಾಮಾಬಾದ್: ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ ಅವರಿಗೆ ದೇಶ ತೊರೆಯದಂತೆ ಅಲ್ಲಿನ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.

ಸಂವಿಧಾನವನ್ನು ಗಾಳಿಗೆ ತೂರಿ 2007ರಲ್ಲಿ ಆಂತರಿಕ ತುರ್ತುಪರಿಸ್ಥಿತಿ ಘೋಷಣೆ ಮಾಡಿದ್ದ ಮುಷರಫ್ ಅವರ ನಡವಳಿಕೆಯನ್ನು 1973ರ ಕಾಯ್ದೆ ಪ್ರಕಾರ ದೇಶದ್ರೋಹ ಎಂದು ಪರಿಗಣಿಸಬೇಕೆಂದು ವಕೀಲರೊಬ್ಬರು ಸಲ್ಲಿಸಿದ್ದರು. ಅರ್ಜಿಯನ್ನು ಇಂದು ವಿಚಾರಣೆಗೆ ತೆಗೆದುಕೊಂಡ ಪಾಕಿಸ್ತಾನ ಸುಪ್ರೀಂಕೋರ್ಟ್, ಮುಷರಫ್ ಅವರಿಗೆ ದೇಶ ತೊರೆಯದಂತೆ ಎಚ್ಚರಿಕೆ ನೀಡಿದೆ. ಅಲ್ಲದೆ ನಾಳೆ ನಡೆಯಲಿರುವ ವಿಚಾರಣೆಗೆ ಮುಷರಫ್ ಅವರು ತಮ್ಮ ವಕೀಲರೊಂದಿಗೆ ಖುದ್ದು ಹಾಜರಾಗಬೇಕು ಎಂದು ನ್ಯಾಯಾಲಯ ತಿಳಿಸಿದೆ.

ಮುಷರಫ್ ವಿರುದ್ಧದ ದೇಶದ್ರೋಹ ಪ್ರಕರಣವನ್ನು ಇಂದು ವಿಚಾರಣೆಗೆ ತೆಗೆದುಕೊಂಡ ನ್ಯಾ. ಜಾವೆದ್.ಎಸ್.ಖ್ವಾಜಾ ಅವರ ನೇತೃತ್ವದ ದ್ವಿಸದಸ್ಯ ಪೀಠ, ಮುಷರಫ್ ಅವರು ದೇಶ ಬಿಟ್ಟು ಹೋಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಈ ಬಗ್ಗೆ ದೇಶದ ಎಲ್ಲ ವಿಮಾನ ನಿಲ್ದಾಣಗಳಿಗೂ ಆದೇಶ ರವಾನಿಸಬೇಕು ಎಂದು ಸರ್ಕಾರದ ಆಂತರಿಕ ಕಾರ್ಯದರ್ಶಿಗಳಿಗೆ ಸೂಚಿಸಿದೆ.

2007ರಲ್ಲಿ ರಾಜಕೀಯ ಮೇಲಾಟದಲ್ಲಿ ಸೋತಿದ್ದ ಪಾಕ್ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ ಅವರು, ತಮ್ಮ ಅಧ್ಯಕ್ಷ ಸ್ಥಾನವನ್ನು ಉಳಿಸಿಕೊಳ್ಳಲು ಪಾಕಿಸ್ತಾನದಲ್ಲಿ ಆಂತರಿಕ ತುರ್ತುಪರಿಸ್ಥಿತಿ ಘೋಷಿಸಿದ್ದರು. ಈ ಬಗ್ಗೆ ಪಾಕಿಸ್ತಾನದ ಯಾವುದೇ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಬಾರದು ಎಂದು ಯೋಚಿಸಿದ್ದ ಅವರು, ಆಗಿಂದ್ದಾಗ್ಗೆ ದೇಶದಲ್ಲಿರುವ ಎಲ್ಲ ನ್ಯಾಯಾಲಯಗಳ ನ್ಯಾಯಮೂರ್ತಿಗಳನ್ನು ಬದಲಿಸಿದ್ದರು. ಸಂವಿಧಾನವನ್ನು ಗಾಳಿಗೆ ತೂರಿ ತುರ್ತುಪರಿಸ್ಥಿತಿ ಘೋಷಿಸಿದ್ದ ಮುಷರಫ್ ಅವರ ನಿರ್ಧಾರಕ್ಕೆ ಪಾಕಿಸ್ತಾನದಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.