ರಾಜಕೀಯ ನಿವೃತ್ತಿ ನಿರ್ಧಾರ ಹಿಂಪಡೆದ 'ಕೃಷ್ಣ'ಯ್ಯ ಶೆಟ್ಟಿ

ಕೋಲಾರ: ಇತ್ತೀಚೆಗೆ ರಾಜಕೀಯ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದ ಮಾಲೂರು ಕ್ಷೇತ್ರದ ಬಿಜೆಪಿ ಶಾಸಕ ಕೃಷ್ಣಯ್ಯ ಶೆಟ್ಟಿ ಅವರು, ಬುಧವಾರ ತಮ್ಮ ನಿರ್ಧಾರವನ್ನು ಹಿಂಪಡೆದಿದ್ದಾರೆ.
ಈ ಬಗ್ಗೆ ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೃಷ್ಣಯ್ಯ ಶೆಟ್ಟಿ, ಬೆಂಬಲಿಗರ ಒತ್ತಾಯಕ್ಕೆ ಮಣಿದು ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. 'ಇಂದು ಅಮಾವಾಸ್ಯೆ ಇದ್ದು, ನಾಳೆ ಯುಗಾದಿ ಹಬ್ಬವಿದೆ. ಹಾಗಾಗಿ ತಾವು ಏಪ್ರಿಲ್ 15 ರಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ' ಎಂದು ಹೇಳಿದ್ದಾರೆ.
ಇತ್ತೀಚೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ, ಕೃಷ್ಣಯ್ಯ ಶೆಟ್ಟಿ ಅವರಿಗೆ ಟಿಕೆಟ್ ನಿರಾಕರಿಸಿತ್ತು. ಕೃಷ್ಣಯ್ಯ ಶೆಟ್ಟಿ ಅವರು ನ್ಯಾಯಾಲಯದ ವಿಚಾರಣೆ ಎದುರಿಸುತ್ತಿರುವುದರಿಂದ ಅವರಿಗೆ ಬಿಜೆಪಿ ಟಿಕೆಟ್ ನೀಡಲು ಬಿಜೆಪಿ ಹೈಕಮಾಂಡ್ ನಿರಾಕರಿಸಿತ್ತು. ಇದರಿಂದ ಬೇಸರಗೊಂಡಿದ್ದ ಕೃಷ್ಣಯ್ಯ ಶೆಟ್ಟಿ, ಪಕ್ಷಕ್ಕೆ ಮುಜುಗರ ಮಾಡದಿರಲು ರಾಜಕೀಯ ನಿವೃತ್ತಿ ಕೈಗೊಳ್ಳುತ್ತಿರುವುದಾಗಿ ತಿಳಿಸಿದ್ದರು. ಆದರೆ ಅವರ ನಿರ್ಧಾರಕ್ಕೆ ಅವರ ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
ಇಂದು ತಮ್ಮ ನಿರ್ಧಾರವನ್ನು ಹಿಂದಕ್ಕೆ ಪಡೆದಿರುವ ಕೃಷ್ಣಯ್ಯ ಶೆಟ್ಟಿ ಪಕ್ಷೇತರರಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಏಪ್ರಿಲ್ 15ರಂದು ಮಾಲೂರು ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


