ಈಗಿನ ಸುದ್ದಿ

ಭುಲ್ಲರ್‌ಗೆ ಗಲ್ಲು ಖಾಯಂ

ಭುಲ್ಲರ್‌ಗೆ ಗಲ್ಲು ಖಾಯಂ
Published On :

ನವದೆಹಲಿ: ಕ್ಷಮಾದಾನ ಅರ್ಜಿ ವಿಲೇವಾರಿಯಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ತಮ್ಮ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಮಾರ್ಪಡಿಸಿ ಎಂದು ದೆಹಲಿ ಸ್ಫೋಟ ಪ್ರಕರಣದ ಅಪರಾಧಿ ದೇವೇಂದ್ರ ಸಿಂಗ್ ಭುಲ್ಲರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

1993ರ ಕಾರ್ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಭುಲ್ಲರ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಜಿ.ಎಸ್.ಸಿಂಘ್ವಿ ಅವರ ಪೀಠ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿ, ಮಹತ್ವದ ಆದೇಶ ನೀಡಿದೆ. ಅಲ್ಲದೆ ಶಿಕ್ಷೆ ಕಡಿತಕ್ಕೆ ವಿಳಂಬ ಮಾನದಂಡವಲ್ಲ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

ಸುಪ್ರೀಂ ಕೋರ್ಟ್‌ನ ಈ ತೀರ್ಪು, ಗಲ್ಲು ಶಿಕ್ಷೆ ಎದುರುಸುತ್ತಿರುವ ವೀರಪ್ಪನ್ ನ ನಾಲ್ವರು ಸಹಚರರು ಹಾಗೂ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಅಪರಾಧಿಗಳಾಗಿರುವ ತಮಿಳುನಾಡಿನ ಮೂವರ ಗಲ್ಲು ಶಿಕ್ಷೆಯ ಮೇಲೂ ಪರಿಣಾಮ ಬೀರಲಿದೆ. ಸುಪ್ರೀಂ ಕೋರ್ಟ್ ಮುಂದೆ ಇಂಥಹ 20ಕ್ಕು ಹೆಚ್ಚು ಅರ್ಜಿಗಳಿದ್ದು, ಆ ಎಲ್ಲ ಪ್ರಕರಣಗಳಲ್ಲೂ ಇದೇ ತೀರ್ಪನ್ನೇ ಮಾರ್ಗದರ್ಶಿಯಾಗಿ ಬಳಸಿಕೊಳ್ಳುವ ಸಾಧ್ಯತೆ ಇದೆ.


ಯುವ ಕಾಂಗ್ರೆಸ್ ನಾಯಕ ಎಂ.ಎಸ್. ಬಿಟ್ಟ ಅವರನ್ನು ಗುರಿಯಾಗಿಸಿಕೊಂಡು ಭುಲ್ಲರ್ ಕಾರ್ ಬಾಂಬ್ ಸ್ಫೋಟಿಸಿದ್ದ. ಈ ಘಟನೆಯಲ್ಲಿ 9 ಜನ ಮೃತಪಟ್ಟಿದ್ದರು. ಈ ಸಂಬಂಧ ಭುಲ್ಲರ್ ಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು.

ನಂತರ ಭುಲ್ಲರ್ ಜನವರಿ 14, 2003ರಲ್ಲಿ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದ. ಮೇ 25, 2011ರಲ್ಲಿ ರಾಷ್ಟ್ರಪತಿಗಳು ಭುಲ್ಲರ್ ಅರ್ಜಿಯನ್ನು ವಜಾಗೊಳಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.