ಜೆಡಿಎಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು: ಜೆಡಿಎಸ್ ರಾಷ್ಟ್ರಾದ್ಯಕ್ಷ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಶನಿವಾರ ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ಬೆಂಗಳೂರಿನಲ್ಲಿರುವ ಜೆಡಿಎಸ್ ಕಚೇರಿಯ ಮಾಧ್ಯಮ ಕೇಂದ್ರದಲ್ಲಿ, 'ನಮ್ಮ ವಾಗ್ದಾನ, ತೀರ್ಮಾನ ನಿಮ್ಮದು' ಎಂಬ ಶೀರ್ಷಿಕೆಯ ಚುನಾವಣಾ ಪ್ರಣಾಳಿಕೆಯನ್ನು ಮಾಜಿ ಪ್ರಧಾನಿ ದೇವೇಗೌಡ ಅವರು ಬಿಡುಗಡೆ ಮಾಡಿ ಮಾತನಾಡಿದರು. 'ಜೆಡಿಎಸ್ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಿದರೆ, ಪ್ರಣಾಳಿಕೆಯಲ್ಲಿ ಘೋಷಣೆಯಾಗಿರುವ ಎಲ್ಲ ಅಂಶಗಳನ್ನು ಅನುಷ್ಠಾನಗೊಳಿಸುತ್ತೇವೆ. ಪಾರದರ್ಶಕ ಆಡಳಿತ, ಜನಪರ ನಾಯಕತ್ವ ಮತ್ತು ಆರ್ಥಿಕ ಸದೃಢತೆಯೇ ನಮ್ಮ ಗುರಿ ಎಂದು ದೇವೇಗೌಡ ಹೇಳಿದರು.
ಇಂದು ಬಿಡುಗಡೆಯಾದ ಜೆಡಿಎಸ್ ಚುನಾವಣಾ ಪ್ರಣಾಳಿಕೆಯಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಕೃಷ್ಣಾ ಮೇಲ್ದಂಡೆ ಯೋಜನೆಯನ್ನು 5 ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ. ಅಂತೆಯೇ ಕರ್ನಾಟಕದ ನೀರಾವರಿ ಯೋಜನೆಗಳಿಗಾಗಿ 65 ಸಾವಿರ ಕೋಟಿ, ವಿದ್ಯುತ್ ಸಮಸ್ಯೆ ನಿವಾರಣೆಗೆ ವಿಶೇಷ ಒತ್ತು ಮತ್ತು ಇದಕ್ಕಾಗಿ 3 ಸಾವಿರ ಕೋಟಿ ರು. ಮೀಸಲು, ಶೇ.18 ರಷ್ಟು ಥರ್ಮಲ್ ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಆಶ್ವಾಸನೆ ನೀಡಲಾಗಿದೆ.
ಅಂತೆಯೇ ಭ್ರಷ್ಟಾಚಾರ ನಿರ್ಮೂಲನೆಗಾಗಿ ಕರ್ನಾಟಕ ಲೋಕಾಯುಕ್ತಕ್ಕೆ ವಿಶೇಷ ಅಧಿಕಾರಿ ನೀಡಲಾಗುವುದು. ಆ ಮೂಲಕ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುತ್ತೇವೆ ಎಂದು ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ. ಅಲ್ಲದೆ ರಾಜಧಾನಿ ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರು ತ್ಯಾಜ್ಯ ನಿರ್ವಹಣೆಗಾಗಿ ಕಸ ನಿರ್ವಹಣಾ ಪ್ರಾಧಿಕಾರ ರಚನೆ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ಅಲ್ಲದೆ ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಬಳಕೆಯ ಮೇಲೆ ಕಡಿವಾಣ ಹಾಕುತ್ತೇವೆ ಎಂದು ಜೆಡಿಎಸ್ ಘೋಷಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


