ಚೀನಾದಲ್ಲಿ ಅಗ್ನಿ ಅವಘಡ: 11 ಸಾವು
ಬೀಜಿಂಗ್: ಮಧ್ಯ ಚೀನಾದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಅಗ್ನಿಅವಘಡದಲ್ಲಿ ಸುಮಾರು 11 ಮಂದಿ ಸಜೀವ ದಹನವಾಗಿದ್ದಾರೆ.
ಚೀನಾದ ಹುಬೇಯ ಫಾನ್‌ಚೆಂಗ್ ಜಿಲ್ಲೆಯಲ್ಲಿರುವ ಖಾಸಗಿ ಹೊಟೆಲ್ ಮತ್ತು ಇಂಟರ್‌ನೆಟ್ ಕೆಫೆಯಲ್ಲಿ ಇಂದು ಬೆಳಗ್ಗೆ 6.30ರ ಸಮಯದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಘಟನೆಯಲ್ಲಿ ಹೊಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ, 11 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಭಾರಿ ಪ್ರಮಾಣದಲ್ಲಿ ಆವರಿಸಿದ್ದ ಬೆಂಕಿ, ಇಡೀ ಕಟ್ಟಡವನ್ನು ಆವರಿಸಿಕೊಂಡ ಪರಿಣಾಮದಿಂದಾಗಿ ಗಾಯಾಳು ಸಂಖ್ಯೆ ಹೆಚ್ಚಾಗಿದೆ. ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಕೊನೆಗೂ ಮಧ್ಯಾಹ್ನದ ವೇಳೆಗೆ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಅಗ್ನಿ ಅವಘಡಕ್ಕೆ ನಿರ್ಧಿಷ್ಟ ಕಾರಣ ತಿಳಿದು ಬಂದಿಲ್ಲವಾದರೂ, ಬೆಂಕಿ ಆಕಸ್ಮಿಕಕ್ಕೆ ಹೊಟೆಲ್‌ನಲ್ಲಿ ಗ್ಯಾಸ್ ಲೀಕ್ ಅಥವಾ ಇಂಟರ್‌ನೆಟ್ ಕೆಫೆಯ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

