ಈಗಿನ ಸುದ್ದಿ

ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಬಡ ಮಹಿಳೆ

Published On :

ಸೇಲಂ: ಧನದಾಹಿ ವೈಧ್ಯರ ಕ್ರೂರ ಧೋರಣೆಯಿಂದ ಮಹಿಳೆಯೊಬ್ಬಳು ರಸ್ತೆಯಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.

ಆಂಧ್ರಪ್ರದೇಶದ ವಿಜಯವಾಡ ಮೂಲದ ಬಡ ಗರ್ಭಿಣಿ ಮಹಿಳೆಯೊಬ್ಬಳು ತನ್ನ ಪತಿಯೊಂದಿಗೆ ಸೇಲಂಗೆ ಆಗಮಿಸಿದ್ದಳು. ಕೆಲಸ ಅರಸಿ ಸೇಲಂಗೆ ಬಂದಿದ್ದ ಆ ದಂಪತಿಗಳಿಗೆ ಐದು ವರ್ಷದ ಮತ್ತು 3 ವರ್ಷದ ಇಬ್ಬರು ಗಂಡು ಮಕ್ಕಳು ಇದ್ದರು. ಆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಆಕೆಯ ಪತಿ, ಆಕೆಯನ್ನು ಸೇಲಂನ ಸರ್ಕಾರಿ ಅಸ್ಪತ್ರೆಗೆ ದಾಖಲು ಮಾಡಿದ್ದನು.

ತುರ್ತು ಚಿಕಿತ್ಸೆಯ ಅವಶ್ಯಕತೆ ಇದ್ದ, ಆ ಮಹಿಳೆಯನ್ನು ಆಸ್ಪತ್ರೆಯ ದಾದಿಯರು ವಾರ್ಡ್‌ಗೆ ಶಿಫ್ಟ್ ಮಾಡಿ, ಕೌಂಟರ್‌ನಲ್ಲಿ 1 ಸಾವಿರು ರುಪಾಯಿ ನೀಡಲು ಸೂಚಿಸಿದ್ದರು. ಆದರೆ ಕೂಲಿ ಕೆಲಸ ಮಾಡುವ ಆತನ ಬಳಿ ಅಷ್ಟು ಮೊತ್ತ ಇಲ್ಲ ಎಂದು ತಿಳಿದಾಗ, ಮಾನವೀಯತೆ ಮರೆತ ದಾದಿಯರು ಮತ್ತು ಆಸ್ಪತ್ರೆಯ ವೈಧ್ಯರು ಆಕೆಯನ್ನು ಮತ್ತು ಆಕೆಯ ಪತಿಯನ್ನು ಆಸ್ಪತ್ರೆಯಿಂದ ಹೊರಹಾಕಿದ್ದಾರೆ. ಬೇರೆ ದಾರಿ ಕಾಣದೇ ಆ ಬಡ ದಂಪತಿಗಳು ರಸ್ತೆಯಲ್ಲಿ ನಡೆದುಕೊಂಡೇ ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿದ್ದಾರೆ.

ಈ ನಡುವೆ ಮಹಿಳೆಗೆ ಹೆರಿಗೆ ನೋವು ತೀವ್ರವಾಗಿ, ಆಕೆ ರಸ್ತೆಯಲ್ಲಿಯೇ ಕುಸಿದು ಬಿದ್ದಿದ್ದಾಳೆ. ರಸ್ತೆಯಲ್ಲಿ ಹೋಗುತ್ತಿದ್ದ ದಾರಿಹೋಕರು ಇದನ್ನು ಗಮನಿಸಿ, ಆಕೆಯನ್ನು ಸಮೀಪದಲ್ಲಿಯೇ ಇದ್ದ ಬಸ್ ನಿಲ್ದಾಣದಲ್ಲಿ ಮಲಗಿಸಿ ಆರೈಕೆ ಮಾಡಿದ್ದಾರೆ. ಅಲ್ಲದೆ ಆ್ಯಂಬುಲೆನ್ಸ್‌ಗೆ ಕರೆ ಮಾಡಿದ್ದು, ಆ್ಯಂಬುಲೆನ್ಸ್ ಸ್ಥಳಕ್ಕಾಗಮಿಸುವಷ್ಟರಲ್ಲಿಯೇ ಆಕೆಗೆ ಹೆರಿಗೆಯಾಗಿತ್ತು. ದಾರಿ ಹೋಕ ಮಹಿಳೆಯರು ಆಕೆಗೆ ಹೆರಿಗೆ ಮಾಡಿದ್ದಾರೆ.

ಕೂಡಲೇ ಆಕೆಯನ್ನು ಮತ್ತು ಮಗುವನ್ನು ಸ್ಥಳೀಯರ ಸಹಾಯದಿಂದ ಅದೇ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ತಾಯಿ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ. ಘಟನೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ವಳ್ಳಿನಾಯಗಂ ಅವರು, ಘಟನೆಗೆ ತಾವು ವಿಷಾದ ವ್ಯಕ್ತಪಡಿಸಿದ್ದು, ಘಟನೆ ಕುರಿತು ತನಿಖೆ ನಡೆಸಲು ತಂಡವನ್ನು ರಚಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.