ವಾಜಪೇಯಿ ಅವರ ರಾಜಧರ್ಮವನ್ನು ಪಾಲಿಸಿ: ನಿತೀಶ್

ನವದೆಹಲಿ: ಬಿಜೆಪಿ ಪಕ್ಷ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ರಾಜಧರ್ಮವನ್ನು ಪಾಲಿಸಲಿ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆಯುತ್ತಿರುವ 2 ದಿನಗಳ ಜೆಡಿ(ಯು) ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಮಾತನಾಡಿದ ನಿತೀಶ್ ಕುಮಾರ್ ಅವರು, ಮತ್ತೊಮ್ಮೆ ಬಿಜೆಪಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಎನ್‌ಡಿಎಯ ಪ್ರಧಾನಿ ಅಭ್ಯರ್ಥಿಯಾಗುವ ಕುರಿತು ಮಾತನಾಡಿದ ಅವರು, 'ನಾನು ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ. ಆದರೆ ಪ್ರಧಾನಿ ಹುದ್ದೆಗೆ ತನ್ನದೇ ಆದ ಸ್ಥಾನಮಾನವಿದೆ. ಹೀಗಾಗಿ ಸರ್ವರನ್ನೂ ಸರಿಸಮಾನವಾಗಿ ಕಾಣುವ ಉತ್ತಮ ಹಾಗು ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವುದು ನಮ್ಮ ಜವಾಬ್ದಾರಿ'.
'ಎಲ್.ಕೆ. ಅಡ್ವಾಣಿಯಂತಹ ಉತ್ತಮ ವ್ಯಕ್ತಿಗಳು ಪ್ರಧಾನಿಯಾದರೆ ನಾನು ಅದನ್ನು ಸ್ವಾಗತಿಸುತ್ತೇನೆ. ಆದರೆ ಇದಕ್ಕೆ ಬಿಜೆಪಿ ಸ್ಪಂದಿಸುತ್ತಿರುವಂತೆ ಕಾಣಿಸುತ್ತಿಲ್ಲ. ನಾವು ಎನ್‌ಡಿಎಯಲ್ಲಿಯೇ ಮುಂದುವರಿಯಲು ಬಿಜೆಪಿ ಬಯಸಿದರೆ ನಮ್ಮ ಕೆಲವು ವಿಚಾರಗಳಿಗೆ ಅದು ಮನ್ನಣೆ ನೀಡಲೇಬೇಕು ಮತ್ತು ಪ್ರಧಾನಿ ಅಭ್ಯರ್ಥಿ ವಿಚಾರದ ಬಗ್ಗೆ ಪಕ್ಷ ತೆಗೆದುಕೊಂಡಿರುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ' ಎಂದು ನಿತೀಶ್ ಕುಮಾರ್ ಹೇಳಿದರು.
ವಾಜಪೇಯಿ ರಾಜಧರ್ಮವನ್ನು ಪಾಲಿಸಿ
'ನಾನು ಕಂಡಂತೆ ಎನ್‌ಡಿಎ ಮೈತ್ರಿಕೂಟವನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸಿದ ಏಕಮಾತ್ರ ವ್ಯಕ್ತಿ ಅಟಲ್ ಬಿಹಾರಿ ವಾಜಪೇಯಿ ಅವರು. ಸರ್ವರನ್ನೂ ಸಮನಾವಾಗಿ ಕಾಣುವ ಅವರ ವ್ಯಕ್ತಿತ್ವದಿಂದಲೇ ಅವರು ದೇಶದ ನಾಯಕರಾದರು. ಆದರೆ ಈಗ ಎನ್‌ಡಿಎಯಲ್ಲಿ ಅವರು ಹಾಕಿಕೊಟ್ಟ ಮಾರ್ಗಗಳನ್ನು ಬದಲಾವಣೆ ಮಾಡಲಾಗುತ್ತಿದೆ. ಹಾಗೇನಾದರೂ ಎನ್‌ಡಿಎ ಬದಲಾವಣೆ ಮಾರ್ಗ ಹಿಡಿದರೆ ಸಮಸ್ಯೆಗಳು ಉಲ್ಬಣಿಸುತ್ತವೆ. ಹೀಗಾಗಿ ವಾಜಪೇಯಿ ಅವರು ಪಾಲಿಸಿದ ರಾಜಧರ್ಮವನ್ನು ಬಿಜೆಪಿ ಮುಖಂಡರು ಪಾಲಿಸಬೇಕು ಎಂದು ನಿತೀಶ್ ಕುಮಾರ್ ಬಿಜೆಪಿಯನ್ನು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


