ಜರ್ಮನ್ ಬೇಕರಿ ಸ್ಫೋಟ: ಹಿಮಾಯತ್ ಬೇಗ್ ಅಪರಾಧಿ

ಪುಣೆ: 2010ರ ಪುಣೆಯ ಜರ್ಮನ್ ಬೇಕರಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಯಾಗಿದ್ದ, ಇಂಡಿಯನ್ ಮುಜಾಹಿದ್ದೀನ್ ಉಗ್ರ ಹಿಮಾಯತ್ ಬೇಗ್ ಪಾತ್ರ ಸಾಬೀತಾಗಿದೆ.
2010ರ ಫೆಬ್ರವರಿಯಲ್ಲಿ ಪುಣೆಯ ಜರ್ಮನ್ ಬೇಕರಿ ಪ್ರಕರಣದಲ್ಲಿ ಬಂಧಿತ ಉಗ್ರ ಹಿಮಾಯತ್ ಬೇಗ್ನ ಪಾತ್ರ ಸಾಬೀತಾಗಿದ್ದು, ಆತ ಆರೋಪಿ ಎಂದು ಪುಣೆಯ ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ. ಪ್ರಕರಣದಲ್ಲಿ ಹಿಮಾಯತ್ ಬೇಗ್, ಭಯೋತ್ಪಾದನೆ ಕೃತ್ಯ ಮತ್ತು ದೇಶ ದ್ರೋಹ ಕೃತ್ಯದಲ್ಲಿ ಭಾಗಿಯಾಗಿರುವ ವಿಚಾರ ಸ್ಪಷ್ಟವಾಗಿದ್ದು, ಸ್ವತಃ ಆತನೇ ತನ್ನ ಕೃತ್ಯದ ಬಗ್ಗೆ ಪಶ್ಚಾತ್ಥಾಪ ಪಟ್ಟಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದ ಬಗ್ಗೆ ಇಂದು ವಿಚಾರಣೆ ನಡೆಸಿದ ಪುಣೆಯ ವಿಶೇಷ ಸೆಷನ್ಸ್ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎಂ.ಪಿ ದೋತೆ ಅವರು, ಸ್ಫೋಟದಲ್ಲಿ ಹಿಮಾಯತ್ ಬೇಗ್ನ ಪಾತ್ರವಿರುವುದು ಕಂಡುಬಂದಿದ್ದು, ತನಿಖಾ ವರದಿಗಳ ಅನ್ವಯ ಆತನನ್ನು ಅಪರಾಧಿ ಎಂಬ ತೀರ್ಮಾನಕ್ಕೆ ನ್ಯಾಯಾಲಯ ಬರುತ್ತದೆ ಮತ್ತು ಆತನ ಶಿಕ್ಷೆಯ ಪ್ರಮಾಣವನ್ನು ಏಪ್ರಿಲ್ 18 ರಂದು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.
2010ರ ಫೆಬ್ರವರಿ 13ರಂದು ಪುಣೆಯ ಅತ್ಯಂತ ಜನನಿಬಿಡ ಪ್ರದೇಶ ಮತ್ತು ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಕೋರ್ಗಾಂವ್ ಪಾರ್ಕ್ ಬಳಿ ಇರುವ ಜರ್ಮನ್ ಬೇಕರಿ ಬಳಿ ಪ್ರಬಲ ಬಾಂಬ್ ಸ್ಫೋಟವಾಗಿತ್ತು. ಘಟನೆಯಲ್ಲಿ 17 ಮಂದಿ ಧಾರುಣವಾಗಿ ಸಾವನ್ನಪ್ಪಿ, ಸುಮಾರು 64 ಜನರು ಗಂಭೀರವಾಗಿ ಗಾಯಗೊಂಡಿದ್ದರು.
ಮೃತಪಟ್ಟವರಲ್ಲಿ ಅನೇಕ ವಿದೇಶಿಯರು ಮತ್ತು ಹಲವು ಭಾರತೀಯ ಸಾವನ್ನಪ್ಪಿದ್ದರು. ಪ್ರಕರಣವನ್ನು ತನಿಖೆಗೆ ತೆಗೆದುಕೊಂಡ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ, ಬಾಂಬ್ ಸ್ಫೋಟಗೊಂಡ 6 ತಿಂಗಳ ನಂತರ ಅಂದರೆ 2010 ಸೆಪ್ಟೆಂಬರ್ ತಿಂಗಳಿನಲ್ಲಿ ಇಂಡಿಯನ್ ಮುಜಾಹಿದ್ದೀನ್ ಉಗ್ರ ಹಿಮಾಯತ್ ಬೇಗ್ನನ್ನು ಬಂಧಿಸಿದ್ದರು. ಮಹಾರಾಷ್ಟ್ರದ ಲಾತುರ್ ಜಿಲ್ಲೆಯ ಉದ್ಗಿರ್ನಿಂದ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಉಗ್ರ ಹಿಮಾಯತ್ನನ್ನು ಬಂಧಿಸಿದ್ದರು.
ಭಾರತೀಯ ದಂಡ ಸಂಹಿತೆ ಸೆಕ್ಷನ್ 302, 307,102ಬಿ, 153ಎ, 325, 326, ಕೊಲೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ, ಕುತಂತ್ರ ನಡೆಸಿದ ಆರೋಪದದ ಅಡಿಯಲ್ಲಿ ಹಿಮಾಯತ್ ಬೇಗ್ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಇಂದು ಪ್ರಕರಣದ ತೀರ್ಪು ಹೊರಬಿದ್ದಿದ್ದು, ಹಿಮಾಯತ್ ಬೇಗ್ನನ್ನು ನ್ಯಾಯಾಲಯ ಆಪರಾಧಿ ಎಂದು ತೀರ್ಪು ನೀಡಿದೆ. ಅಲ್ಲದೆ ಆತನ ಶಿಕ್ಷೆಯ ಪ್ರಮಾಣವನ್ನು ಏಪ್ರಿಲ್ 18ರಂದು ಪ್ರಕಟಿಸುವುದಾಗಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


