ನಟಿ ರಕ್ಷಿತಾ ಜೆಡಿಎಸ್ ಸೇರ್ಪಡೆ

ಬೆಂಗಳೂರು: ಬಿಎಸ್ಆರ್ ಕಾಂಗ್ರೆಸ್ನ ಮಹಿಳಾ ಘಟಕದ ಅಧ್ಯಕ್ಷೆ ನಟಿ ರಕ್ಷಿತಾ ಪ್ರೇಮ್ ಅವರು ಜೆಡಿಎಸ್ ಸೇರುವ ಸಾಧ್ಯತೆ ಇದೆ. ಈ ಸಂಬಂಧ ಅವರು ಈಗಾಗಲೇ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ್ದು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರೊಂದಿಗೆ ಸೋಮವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸುತ್ತಿದ್ದಾರೆ.
ಇಂದು ಮಧ್ಯಾಹ್ನ ತಮ್ಮ ಪತಿ ಪ್ರೇಮ್ ಅವರೊಂದಿಗೆ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಆಗಮಿಸಿರುವ ರಕ್ಷಿತಾ, ಜೆಡಿಎಸ್ ಸೇರುವ ಬಗ್ಗೆ ಮಾಜಿ ಪ್ರಧಾನಿಯೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.
ಬಿಎಸ್ಆರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಚಾಮರಾಜನಗರದಿಂದ ಸ್ಪರ್ಧಿಸಲು ನಿರ್ಧರಿಸಿದ್ದ ರಕ್ಷಿತಾ, ಸ್ಥಳೀಯ ಕಾರ್ಯಕರ್ತರ ವಿರೋಧ ಹಾಗೂ ಪಕ್ಷದ ನಾಯಕರ ಅಸಹಕಾರದಿಂದಾಗಿ ಈಗ ಪಕ್ಷ ತೊರೆಯಲು ನಿರ್ಧರಿಸಿದ್ದಾರೆ.
ಜೆಡಿಎಸ್ ಸೇರುಲು ನಿರ್ಧರಿಸಿರುವ ರಕ್ಷಿತಾ ಇನ್ನು ಒಂದೆರಡು ದಿನಗಳಲ್ಲಿ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


