ಈಗಿನ ಸುದ್ದಿ

ಭೀಕರ ರಸ್ತೆ ಅಪಘಾತ 2 ಸಾವು

Published On :

ಜೈಪುರ್: ಟ್ರಕ್ ಮತ್ತು ಬೈಕ್‌ನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಬೈಕ್‌ನಲ್ಲಿ ಹೆಂಡತಿ ಹಾಗು ತನ್ನ ಇಬ್ಬರು ಮಕ್ಕಳೊಂದಿಗೆ ಹೋಗುತ್ತಿದ್ದಾಗ ವೇಗವಾಗಿ ಚಲಿಸುತ್ತಿದ್ದ ಟ್ರಕ್‌ನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿ ಚಲಿಸುತ್ತಿದ್ದ ನಾಲ್ವರ ಪೈಕಿ ಹೆಂಡತಿ ಮತ್ತು ಮಗಳು ಮೃತಪಟ್ಟಿದ್ದು, ತಂದೆ ಮಗನಿಗೆ ತೀವ್ರತರವಾದ ಗಾಯಗಳಾಗಿದೆ. ಅಪಘಾತಕೊಳಗಾದ ವ್ಯಕ್ತಿ ಸಹಾಯಕ್ಕಾಗಿ ಜನರನ್ನು ಅಂಗಲಾಚುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆ ನಂತರ ತಂದೆ ಮಗ ಸೇರಿ ತುರ್ತು ಸಹಾಯಕ್ಕಾಗಿ ಸಾರ್ವಜನಿಕರಲ್ಲಿ ಅಂಗಲಾಚುತ್ತಿದ್ದು, 1 ಘಂಟೆ ಕಳೆದರು ಯಾರು ಸಹಾಯಕ್ಕೆ ಬಾರದ ಅವಮಾನವೀಯ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಪಘಾತ ನಡೆದ 20 ನಿಮಿಷಗಳ ನಂತರ ಬೈಕ್‌ನಲ್ಲಿ ಅದೇ ಮಾರ್ಗವಾಗಿ ಬರುತ್ತಿದ್ದ ವ್ಯಕ್ತಿಯೊಬ್ಬ ಇವರ ಸಹಾಯಕ್ಕೆ ಬಂದಿದ್ದು, ಇವರಿಂದ ನಂಬರ್ ಪಡೆದು ಸ್ಥಳಿಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಕೂಡಲೆ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಅಪಘಾತಗೊಳಗಾದವರ ಸಂಬಂಧಿ ಕಮಲೇಶ್ ಎಂಬುವರು ಮಾಹಿತಿ ನೀಡಿದ್ದಾರೆ.

ಈ ಅಪಘಾತದಲ್ಲಿ ತಾಯಿ ಮಗಳು ಮೃತಪಟ್ಟಿದ್ದು, ಗಾಯಗೊಂಡಿದ್ದ ತಂದೆ ಮಗನಿಗೆ ಚಿಕಿತ್ಸೆ ನೀಡಿ ಡಿರ್ಸ್ಚಾಜ್ ಮಾಡಲಾಗಿದೆ ವೈದ್ಯರು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.