ಬಿಜೆಪಿಗೆ ಕೃಷ್ಣಯ್ಯ ಶೆಟ್ಟಿ ರಾಜಿನಾಮೆ: ಪಕ್ಷೇತರರಾಗಿ ನಾಮಪತ್ರ
ಕೋಲಾರ: ಮಾಲೂರು ಶಾಸಕ ಕೃಷ್ಣಯ್ಯ ಶೆಟ್ಟಿ ಅವರು ಸೋಮವಾರ ತಮ್ಮ ಶಾಸಕತ್ವಕ್ಕೆ ರಾಜಿನಾಮೆ ನೀಡಿದ್ದು, ಮಾಲೂರು ಕ್ಷೇತ್ರದಿಂದ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಕೃಷ್ಣಯ್ಯ ಶೆಟ್ಟಿ ಅವರು ಇಂದು ತಮ್ಮ ರಾಜಿನಾಮೆ ಪತ್ರವನ್ನು ಸ್ಪೀಕರ್ ಕೆಜಿ ಬೋಪಯ್ಯ ಅವರಿಗೆ ರವಾನಿಸಿದ್ದು, ತಮ್ಮ ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.
ಮಾಲೂರು ಕ್ಷೇತ್ರದಿಂದ ತಮಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದರ ಕುರಿತು ತೀವ್ರ ಬೇಸರಗೊಂಡಿದ್ದ ಕೃಷ್ಣಯ್ಯ ಶೆಟ್ಟಿ ಅವರು, ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದರು. ಆದರೆ ಕಾರ್ಯಕರ್ತರು ಮತ್ತು ಬೆಂಬಲಿಗರ ಒತ್ತಾಯಕ್ಕೆ ಮಣಿದ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿದು, ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದರು. ಅದರಂತೆ ಇಂದು ತಮ್ಮ ಬಿಜೆಪಿ ಶಾಸಕತ್ವಕ್ಕೆ ರಾಜಿನಾಮೆ ನೀಡಿರುವ ಕೃಷ್ಣಯ್ಯ ಶೆಟ್ಟಿ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಮಾಲೂರು ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿದ್ದಾರೆ.
ಜೈಲು ಶಿಕ್ಷೆ ಅನುಭವಿಸಿ ಬಂದಿರುವ ವ್ಯಕ್ತಿಗಳಿಗೆ ಟಿಕೆಟ್ ನೀಡಬಾರದು ಎಂದು ಬಿಜೆಪಿ ಹೈಕಮಾಂಡ್, ಬಿಜೆಪಿ ರಾಜ್ಯ ಘಟಕಕ್ಕೆ ಸೂಚಿಸಿದ್ದ ಹಿನ್ನಲೆಯಲ್ಲಿ ಕೃಷ್ಣಯ್ಯ ಶೆಟ್ಟಿ ಅವರ ಹೆಸರನ್ನು ಅಭ್ಯರ್ಥಿಗಳ ಪಟ್ಟಿಯಿಂದ ಕೈ ಬಿಡಲಾಗಿತ್ತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರ ಹೆಸರು ಕೂಡ ಕೇಳಿಬಂದಿತ್ತು. ಅಲ್ಲದೆ ಅವರು ಬಿಎಸ್ವೈ ಅವರೊಂದಿಗೆ ಜೈಲು ಶಿಕ್ಷೆಯನ್ನು ಅನುಭವಿಸಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

