ನಾಳೆ ಸಂಜಯ್ದತ್ ಭವಿಷ್ಯ ನಿರ್ಧಾರ

ನವದೆಹಲಿ: ಅಕ್ರಮ ಶಸ್ತ್ರಾಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಶರಣಾಗತಿಗೆ ಕಾಲಾವಕಾಶ ಕೊರಿದ್ದ ಬಾಲಿವುಡ್ ನಟ ಸಂಜಯ್ ದತ್ ಅವರ ಮನವಿಯನ್ನು ನಾಳೆ ಸುಪ್ರೀಂಕೋರ್ಟ್ ವಿಚಾರಣೆಗೆ ತೆಗೆದುಕೊಳ್ಳಲ್ಲಿದ್ದು, ನಾಳೆಯೇ ತೀರ್ಮಾನ ಹೊರಬೀಳುವ ಸಾಧ್ಯತೆ ಇದೆ.
ನಿನ್ನೆ ಸಂಜಯ್ ದತ್ ಅವರು ತಮ್ಮ ವಕೀಲರೊಂದಿಗೆ ನ್ಯಾಯಾಲಯಕ್ಕೆ ಆಗಮಿಸಿ, ಶರಣಾಗತಿ ಕಾಲಾವಕಾಶವನ್ನು ವಿಸ್ತರಿಸುವಂತೆ ಸುಪ್ರೀಂ ಕೋರ್ಟ್ನಲ್ಲಿ ಮನವಿ ಸಲ್ಲಿಸಿದ್ದರು. ನಾಳೆ ಸಂಜಯದತ್ ಅವರ ಮನವಿಯನ್ನು ನ್ಯಾಯಾಲಯ ವಿಚಾರಣೆಗೆ ತೆಗೆದುಕೊಳ್ಳಲ್ಲಿದ್ದು, ಅವರ ಭವಿಷ್ಯ ನಿರ್ಧಾರವಾಗಲಿದೆ.
1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ವೇಳೆ ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಕಳೆದ ಮಾರ್ಚ್ 21ರಂದು ಸಂಜಯ್ದತ್ ಅವರು ಅಪರಾಧಿ ಎಂದು ತೀರ್ಪು ನೀಡಿತ್ತು. ಅಲ್ಲದೆ ಸಂಜಯ್ ದತ್ ಅವರಿಗೆ 5 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ, ಏಪ್ರಿಲ್ 18ರೊಳಗೆ ಶರಣಾಗುವಂತೆ ಸೂಚಿಸಿತ್ತು.
ಒಟ್ಟು ಐದು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಸಂಜಯ್ ದತ್, ವಿಚಾರಣೆ ವೇಳೆ ಒಂದೂವರೆ ವರ್ಷಗಳ ಶಿಕ್ಷೆಯನ್ನು ಈಗಾಗಲೇ ಅನುಭವಿಸಿದ್ದಾರೆ. ಉಳಿದಿರುವ ಮೂರೂವರೆ ವರ್ಷಗಳ ಶಿಕ್ಷೆಯನ್ನು ಅನುಭವಿಸಲು ತಮಗೆ ಶರಣಾಗತಿಗಾಗಿ ಕಾಲಾವಕಾಶ ನೀಡಬೇಕು. ಅಲ್ಲದೆ ಪ್ರಕರಣದ ಕ್ಷಮಾದಾನದ ಅರ್ಜಿ ರಾಜ್ಯಪಾಲರ ಮುಂದಿದ್ದು, ರಾಜ್ಯಪಾಲರು ನಿರ್ಧಾರ ಕೈಗೊಳ್ಳುವವರೆಗೂ ತಮ್ಮ ಶಿಕ್ಷೆಗೆ ತಡೆ ನೀಡಬೇಕು' ಎಂದು ಸುಪ್ರೀಂ ಕೋರ್ಟ್ನಲ್ಲಿ ಮನವಿ ಸಲ್ಲಿಸಿದ್ದರು. ಅಂತೆಯೇ ತಾವು ಶರಣಾಗಲು ಆರು ವಾರಗಳ ಕಾಲ ಸಮಯ ನೀಡಬೇಕು ಎಂದು ಸಂಜಯ್ ದತ್ ಮನವಿ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


