ಈಗಿನ ಸುದ್ದಿ

ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಫೋಟ: 16 ಮಂದಿಗೆ ಗಾಯ

ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಫೋಟ: 16  ಮಂದಿಗೆ ಗಾಯ
Published On :

ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಬಳಿ ಬುಧವಾರ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಎಂಟು ಸಿಆರ್‌ಪಿಎಫ್ ಯೋಧರು ಸೇರಿದಂತೆ 16 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜೆಪಿ ಕಚೇರಿ ಎದುರಗಡೆ ಇರುವ ಪಾರ್ಕಿಂಗ್ ಸ್ಥಳದಲ್ಲಿದ್ದ ಬೈಕ್‌ನಲ್ಲಿ ಬಾಂಬಿಟ್ಟು ಸ್ಫೋಟಿಸಲಾಗಿದೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಇನ್ನು ಸ್ಫೋಟದ ತೀವ್ರತೆಗೆ ಸ್ಥಳದಲ್ಲಿದ್ದ ಒಂದು ಪೊಲೀಸರ ವಾಹನ ಸೇರಿದಂತೆ ನಾಲ್ಕು ಕಾರು ಹಾಗೂ ಮೂರು ಬೈಕ್‌ಗಳು ಸಂಪೂರ್ಣ ಭಸ್ಮವಾಗಿವೆ.

ಭಾರಿ ಶಬ್ದದೊಂದಿಗೆ ಈ ಸ್ಫೋಟ ಸಂಭವಿಸಿದ್ದು, ಸುಮಾರು ನಾಲ್ಕು ಕಿ.ಮಿ.ವರೆಗೆ ಸ್ಫೋಟದ ಸದ್ದು ಕೇಳಿಸಿದೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. ಹೀಗಾಗಿ ಇದು ಸಿಲಿಂಡರ್ ಸ್ಫೋಟ ಅಲ್ಲ ಬಾಂಬ್ ಸ್ಫೋಟ ಎಂಬುದು ಸ್ಪಷ್ಟವಾಗಿ ತಿಳಿದು ಬಂದಿದೆ.

ಸ್ಥಳಕ್ಕೆ ಅಗ್ನಿ ಶಾಮಕ ವಾಹನ, ಬಾಂಬ್ ನಿಷ್ಕ್ರಿಯ ಹಾಗೂ ಬಾಂಬ್ ಪತ್ತೆ ದಳ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಅವರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಇನ್ನು ಸ್ಫೋಟಕ್ಕೆ ಬಳಸಲಾದ ಬೈಕ್‌ನ ನಂಬರ್ ಪತ್ತೆಯಾಗಿದ್ದು, ತಮಿಳುನಾಡು ರಿಜಿಸ್ಟ್ರೇಷನ್ ಹೊಂದಿದ್ದ ಸುಜುಕಿ ಬೈಕ್ ನಂಬರ್ ಟಿಎನ್-22, ಆರ್ 3769 ಆಗಿದ್ದು, ಈ ಬೈಕ್ ಯಾರಿಗೆ ಸೇರಿದ್ದು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.