ಸಂಜಯ್ ಶರಣಾಗಲು 4 ವಾರ ಕಾಲಾವಕಾಶ
ನವದೆಹಲಿ: 1993ರ ಮುಂಬೈ ಸರಣಿ ಸ್ಫೋಟ ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಸದ್ಯಕ್ಕೆ ತೂಗುವ ಕತ್ತಿಯಿಂದ ತಪ್ಪಿಸಿಕೊಂಡಿದ್ದಾರೆ.
ಶರಣಾಗತಿಗೆ ಕಾಲಾವಕಾಶ ಕೋರಿ ಸಂಜಯ್ ದತ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದ್ದು, ಶರಣಾಗಲು ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.
ಸಂಜಯ್ ದತ್ ಅವರು ಸೋಮವಾರ ತಮ್ಮ ವಕೀಲರೊಂದಿಗೆ ನ್ಯಾಯಾಲಯಕ್ಕೆ ಆಗಮಿಸಿ, ಶರಣಾಗತಿಗೆ ನೀಡಿರುವ ಕಾಲಾವಕಾಶವನ್ನು ವಿಸ್ತರಿಸುವಂತೆ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದ್ದರು.
ಇಂದು ಸಂಜಯ್ ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಸದಾಶಿವಂ ಮತ್ತು ಬಿ.ಎಸ್.ಚೌಹ್ವಾಣ್ ಅವರನ್ನೊಳಗೊಂಡ ಸುಪ್ರೀಂ ಪೀಠ, ಶರಾಣಗತಿ ಅವಧಿಯನ್ನು ವಿಸ್ತರಿಸಿದೆ.
1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ವೇಳೆ ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಕಳೆದ ಮಾರ್ಚ್ 21ರಂದು ಸಂಜಯ್ದತ್ ಅವರು ಅಪರಾಧಿ ಎಂದು ತೀರ್ಪು ನೀಡಿತ್ತು. ಅಲ್ಲದೆ ಸಂಜಯ್ ದತ್ ಅವರಿಗೆ 5 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ, ಏಪ್ರಿಲ್ 18ರೊಳಗೆ ಶರಣಾಗುವಂತೆ ಸೂಚಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

