ಈಗಿನ ಸುದ್ದಿ

ಬೆಂಗಳೂರು ಸ್ಫೋಟಕ್ಕೆ ಆಂಧ್ರದ ಬೈಕ್ ಬಳಕೆ

Published On :

ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿ ಬಳಿ ಸಂಭವಿಸಿದ ಬಾಂಬ್ ಸ್ಫೋಟಕ್ಕೆ ಬಳಸಲಾದ ಬೈಕ್ ಆಂಧ್ರಪ್ರದೇಶದಲ್ಲಿ ಕಳ್ಳತನ ಮಾಡಲಾಗಿದೆ ಎಂದು ಪೊಲೀಸ್ ಉನ್ನತ ಮೂಲಗಳು ತಿಳಿಸಿವೆ.

ಸ್ಫೋಟಕ್ಕೆ ಬಳಸಲಾದ ಬೈಕ್‌ನ ನಂಬರ್ ಪತ್ತೆಯಾಗಿದ್ದು, ಉಗ್ರರು ತಮಿಳುನಾಡು ರಿಜಿಸ್ಟ್ರೇಷನ್ ಹೊಂದಿದ್ದ ನಕಲಿ ನಂಬರ್ ಟಿಎನ್-22, ಆರ್ 3769 ಬಳಸಲಾಗಿದೆ. ಈ ಮುಂಚೆ ಪೊಲೀಸರು ಇದು ತಮಿಳುನಾಡಿಗೆ ಸೇರಿದ ಬೈಕ್ ಎಂದು ಭಾವಿಸಿದ್ದರು. ಆದರೆ ಇದೀಗ ಅದು ನಕಲಿ ನಂಬರ್ ಎಂಬ ಸಂಗತಿ ಬೆಳಕಿಗೆ ಬಂದಿದ್ದು, ಪೊಲೀಸರನ್ನು ದಿಕ್ಕು ತಪ್ಪಿಸುವ ಉದ್ದೇಶದಿಂದ ದುಷ್ಕರ್ಮಿಗಳು ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ.

ಬೈಕ್‌ನ ಇಂಜಿನ್ ನಂಬರ್ 1108, ಎಫ್ 001568 ಎಂಬುದು ಪೊಲೀಸ್ ತನಿಖೆಯಿಂದ ಪತ್ತೆಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.