ಈಗಿನ ಸುದ್ದಿ

ತಾಂತ್ರಿಕ ದೋಷ: ವಿಮಾನ ತುರ್ತು ಭೂಸ್ಪರ್ಶ

ತಾಂತ್ರಿಕ ದೋಷ: ವಿಮಾನ ತುರ್ತು ಭೂಸ್ಪರ್ಶ
Published On :

ಜಮ್ಮು ಕಾಶ್ಮೀರ: ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ  ಅವರು ಪ್ರಯಾಣಿಸುತ್ತಿದ್ದ ವಿಮಾನವು ತಾಂತ್ರಿಕ ದೋಷದಿಂದಾಗಿ ಕಿಶ್ತ್‌ವಾರ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಶ್ರೀನಗರಕ್ಕೆ ಹೊರಡಬೇಕಿದ್ದ ಒಮರ್ ಅಬ್ದುಲಾ ಅವರು ಕಿಶ್ತ್‌ವಾರ್ ವಿಮಾನ ನಿಲ್ದಾಣದಿಂದ ಹೊರಟ ಕೆಲವೆ ನಿಮಿಷಗಳಲ್ಲಿ ತಾಂತ್ರಿಕ ದೋಷದಿಂದಾಗಿ ತುರ್ತು ಭೂಸ್ಪರ್ಶ ಮಾಡಿದ್ದು, ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಘಟನೆಯಲ್ಲಿ ಯಾರಿಗೂ ತೊಂದರೆಯಾಗಿಲ್ಲ.

ಶ್ರೀನಗರದಿಂದ 200 ಕಿ.ಲೋ ಮೀಟರ್ ದೂರದ ಕಿಶ್ತ್‌ವಾರ್ ನಗರದಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಭಾಗವಹಿಸಿ, ನಂತರ ಪ್ರವಾಸಿ ಮಂದಿರದ ಶಂಕು ಸ್ಥಾಪನೆಗೆ ಚಾಲನೆ ನೀಡಿ ಕಿಶ್ತ್‌ವಾರ್‌ನಿಂದ ಶ್ರೀನಗರಕ್ಕೆ ತೆರಳಬೇಕಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಘಟನೆ ನಂತರ ಒಮರ್ ಅವರು ಕಾರಿನಲ್ಲಿ ಶ್ರೀನಗರಕ್ಕೆ ತೆರಳಿದರು ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.