ಈಗಿನ ಸುದ್ದಿ

ದಾಳಿ ಬಗ್ಗೆ ಮಾಹಿತಿ ಇರಲಿಲ್ಲ: ಸಿಎಂ ಶೆಟ್ಟರ್

ದಾಳಿ ಬಗ್ಗೆ ಮಾಹಿತಿ ಇರಲಿಲ್ಲ: ಸಿಎಂ ಶೆಟ್ಟರ್
Published On :

ಬೆಂಗಳೂರು: ಮಲ್ಲೇಶ್ವರಂನಲ್ಲಿ ನಡೆದ ಬಾಂಬ್ ದಾಳಿ ಕುರಿತು ಯಾವುದೇ ರೀತಿಯ ಮಾಹಿತಿ ಲಭ್ಯವಾಗಿರಲಿಲ್ಲ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.

ನಿನ್ನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿನ ಬಿಜೆಪಿ ಕಚೇರಿ ಸಮೀಪ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ವಿಚಾರಿಸಲು ಕೆಸಿ ಜನರಲ್ ಆಸ್ಪತ್ರೆಗೆ ಭೇಟಿ ನೀಡಿದ್ದ ಸಿಎಂ ಜಗದೀಶ್ ಶೆಟ್ಟರ್ ಅವರು ದಾಳಿಯಲ್ಲಿ ಉಗ್ರರ ಕೈವಾಡವಿರುವ ಕುರಿತು ಶಂಕೆ ವ್ಯಕ್ತಪಡಿಸಿದರು.

'ಮಲ್ಲೇಶ್ವರಂ ಬಿಜೆಪಿ ಕಚೇರಿ ಸಮೀಪ ನಡೆದ ಬಾಂಬ್ ದಾಳಿ ಕುರಿತು ಕೇಂದ್ರದ ಗುಪ್ತಚರ ಇಲಾಖೆ ಮಾಹಿತಿ ನೀಡಿರಲಿಲ್ಲ. ದಾಳಿಯಲ್ಲಿ ಇಂಡಿಯನ್ ಮುಜಾಹಿದ್ದೀನ್ ಸಂಘಟನೆ ಅಥವಾ ಬೇರಾವುದೇ ಉಗ್ರ ಸಂಘಟನೆಯ ಕೈವಾಡವಿರಬಹುದು. ಪ್ರಕರಣದ ಕುರಿತು ಪೊಲೀಸ್ ಮತ್ತು ಕೇಂದ್ರೀಯ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿದ್ದು, ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ ಎಲ್ಲ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ' ಎಂದು ಸಿಎಂ ಶೆಟ್ಟರ್ ಹೇಳಿದರು.

ಜನರ ಅನುಕಂಪ ಪಡೆಯಲು ಕೇಸರಿ ಉಗ್ರರ ಕೈವಾಡ: ಆರೋಪ ತಿರಸ್ಕರಿಸಿದ ಶೆಟ್ಟರ್
ಈ ನಡುವೆ ನಿನ್ನೆ ನಡೆದ ಬಾಂಬ್ ದಾಳಿ ಕುರಿತು 'ಜನರ ಅನುಕಂಪ ಗಿಟ್ಟಿಸಲು ಬಿಜೆಪಿಯ ಕೇಸರಿ ಉಗ್ರರು ನಡೆಸಿದ ಕಾರ್ಯವಿದು' ಎಂಬ ಪ್ರತಿಪಕ್ಷಗಳ ಟೀಕೆಯನ್ನು ಖಂಡಿಸಿದ ಶೆಟ್ಟರ್, ಇಂತಹ ಸೂಕ್ಷ್ಮ ವಿಚಾರಗಳಲ್ಲಿಯೂ ರಾಜಕೀಯ ಮಾಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದರು. 'ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ. ತನಿಖೆ ಪೂರ್ಣಗೊಂಡು ಶೀಘ್ರವೇ ವರದಿ ಹೊರಬೀಳಲಿದೆ. ಅಲ್ಲಿಯ ವರೆಗೂ ಪ್ರಕರಣದ ಕುರಿತು ಯಾವುದೇ ರೀತಿಯ ಹೇಳಿಕೆ ನೀಡದಂತೆ ಅವರಲ್ಲಿ ಮನವಿ ಮಾಡುತ್ತೇನೆ ಎಂದು ಶೆಟ್ಟರ್ ತಿಳಿಸಿದರು. ಅಲ್ಲದೆ ಸ್ಫೋಟದಲ್ಲಿ ಗಾಯಗೊಂಡ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಮತ್ತು ಘಟನಾ ಸ್ಥಳದ ಅಕ್ಕಪಕ್ಕದ ಮನೆಗಳಿಗಾದ ಹಾನಿಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಆಶ್ವಾಸನೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.