ಈಗಿನ ಸುದ್ದಿ

ಬಾಂಬ್ ಸ್ಫೋಟ ತನಿಖೆಗೆ 4 ವಿಶೇಷ ತಂಡ: ಪಚಾವೋ

ಬಾಂಬ್ ಸ್ಫೋಟ ತನಿಖೆಗೆ 4 ವಿಶೇಷ ತಂಡ: ಪಚಾವೋ
Published On :

ಬೆಂಗಳೂರು: ಮಲ್ಲೇಶ್ವರಂನ ಬಿಜೆಪಿ ಕಚೇರಿ ಬಳಿ ಬುಧವಾರ ನಡೆದ ಬಾಂಬ್ ಸ್ಫೋಟ ಪ್ರಕರಣದ ತನಿಖೆಗಾಗಿ ನಾಲ್ಕು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಲಾಲ್ ರುಖುಮ ಪಚಾವೋ ತಿಳಿಸಿದ್ದಾರೆ.

ಬಾಂಬ್ ಸ್ಫೋಟ ಪ್ರಕರಣ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಪಚಾವೋ, ಪ್ರಕರಣದ ತನಿಖೆಗಾಗಿ 4 ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದ್ದು, ಈ ನಾಲ್ಕು ತಂಡಗಳಿಗೆ ಕೇಂದ್ರೀಯ ತನಿಖಾ ದಳ(ಎನ್‌ಐಎ) ಮತ್ತು ರಾಷ್ಟ್ರೀಯ ಭದ್ರತಾ ಪಡೆಗಳು ನೆರವು ನೀಡುತ್ತವೆ ಎಂದು ತಿಳಿಸಿದರು.

'ಪ್ರಕರಣವನ್ನು ರಾಜ್ಯ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಬಾಂಬ್ ಸ್ಫೋಟ ನಡೆಸಿದವರ ಕುರಿತು ನೇರ ಅಥವಾ ಪರೋಕ್ಷವಾಗಿ ಮಾಹಿತಿ ನೀಡಿದವರಿಗೆ 5 ಲಕ್ಷ ನಗದು ಬಹುಮಾನವನ್ನು ನೀಡಲಾಗುತ್ತದೆ. ಘಟನೆಯಲ್ಲಿ ಉಗ್ರರ ಕೈವಾಡವಿರುವ ಸಾಧ್ಯತೆ ಇದ್ದು, ತನಿಖೆಯನ್ನು ಮುಂದುವರೆಸಲಾಗಿದೆ. ಅಪರಾಧ ದಳದ ಜಂಟಿ ಪೊಲೀಸ್ ಆಯುಕ್ತರಾದ ಪ್ರಣಬ್ ಮೊಹಾಂತಿ ಮತ್ತು ರಾಘವೇಂದ್ರ ಔರಾದ್‌ಕರ್ ಅವರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಲು ನೇಮಿಸಿರುವ 4 ವಿಶೇಷ ತಂಡಗಳು ಕಾರ್ಯ ನಿರ್ವಹಿಸಲಿವೆ'.

'ಘಟನಾ ಸ್ಥಳದಿಂದ ಹಲವು ಶಂಕಾಸ್ಪದ ವಸ್ತುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯ, ಎನ್‌ಐಎ, ಎನ್‌ಎಸ್‌ಜಿ ಮತ್ತು ರಾಷ್ಟ್ರೀಯ ಭದ್ರತಾ ಪಡೆಗಳು ಸಂಗ್ರಹಿಸಿದ್ದು, ಅವುಗಳನ್ನು ವೈಜ್ಞಾನಿಕವಾಗಿ ಪರಿಶೀಲಿಸುತ್ತಿದ್ದಾರೆ' ಎಂದು ಪಚಾವೋ ತಿಳಿಸಿದರು.

ಗಾಯಾಳುಗಳಿಗೆ ಸರ್ಕಾರದ ನೆರವು ಘೋಷಣೆ
ನಿನ್ನೆ ಮಲ್ಲೇಶ್ವರಂನ ಬಿಜೆಪಿ ಕಚೇರಿ ಬಳಿ ನಡೆದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ 11 ಪೊಲೀಸರು ಸೇರಿದಂತೆ ಒಟ್ಟು 16 ಮಂದಿಗೆ ರಾಜ್ಯ ಸರ್ಕಾರ ನೆರವು ಘೋಷಿಸಿದೆ. ಚಿಕಿತ್ಸಾ ವೆಚ್ಚ ಸೇರಿದಂತೆ ಗಂಭೀರವಾಗಿ ಗಾಯಗೊಂಡವರಿಗೆ ತಲಾ ಒಂದು ಲಕ್ಷ ಮತ್ತು ಸಣ್ಣ ಪುಟ್ಟ ಗಾಯಗಳಾದವರಿಗೆ ತಲಾ 5000 ರುಪಾಯಿಗಳನ್ನು ನೀಡುವುದಾಗಿ ಸರ್ಕಾರ ಘೋಷಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.