ಮುಂಬೈ ಸರಣಿ ಸ್ಫೋಟ: ಖಾಝಿ ಶರಣಾಗತಿ ಸಮಯ ವಿಸ್ತರಣೆ
ನವದೆಹಲಿ: 1993ರ ಮುಂಬೈ ಸ್ಫೋಟದ ರೂವಾರಿ ಜೈಬುನ್ನೀಸಾ ಖಾಝಿಯ ಶರಣಾಗತಿ ಕಾಲಾವಕಾಶವನ್ನು ಸುಪ್ರೀಂಕೋರ್ಟ್ ವಿಸ್ತರಿಸಿದೆ.
1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಬುನ್ನೀಸಾ ಖಾಝಿಗೆ ನೀಡಲಾಗಿದ್ದ ಶರಣಾಗತಿ ಕಾಲಾವಕಶಾವನ್ನು 4 ವಾರಗಳ ವರೆಗೆ ವಿಸ್ತರಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಸರಣಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿಗಳಾಗಿರುವ ಜೈಬುನ್ನೀಸಾ ಖಾಝಿ(70), ಇಸಾಕ್ ಮೊಹಮದ್ ಹಜ್ವಾನೆ (76), ಷರೀಫ್ ಅಬ್ದುಲ್ ಗಫೂರ್ ಪಾರ್ಕರ್ ಅಲಿಯಾಸ್ ದಾದಾ ಬಾಯ್ (88) ಅವರು ಕಳೆದ ಮಂಗಳವಾರ ತಮ್ಮ ಶರಣಾಗತಿ ಸಮಯವನ್ನು ವಿಸ್ತರಿಸಬೇಕು ಎಂದು ಮನವಿ ಸಲ್ಲಿಸಿದ್ದರು. 'ತಮ್ಮ ಕ್ಷಮಾದಾನ ಅರ್ಜಿ ರಾಷ್ಟ್ರಪತಿಗಳ ಮುಂದಿದ್ದು, ಅವರು ಅರ್ಜಿಯನ್ನು ಇತ್ಯರ್ಥಪಡಿಸುವವರೆಗೂ ತಮಗೆ ನೀಡಿದ್ದ ಶಿಕ್ಷೆಯನ್ನು ಪೂರ್ಣಗೊಳಿಸಲು ಸಮಯಾವಕಾಶ ನೀಡಬೇಕು' ಎಂದು ಆಪರಾಧಿಗಳು ಸುಪ್ರೀಂಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದರು.
ಬುಧವಾರ ವಿಚಾರಣೆ ನಡೆಸಿದ್ದ ನ್ಯಾಯಾಲಯ ಮೂವರೂ ದೋಷಿಗಳ ಮನವಿಯನ್ನು ವಜಾಗೊಳಿಸಿತ್ತು. ಆದರೆ ಇಂದು ಖಾಝಿಯ ಶರಣಾಗತಿ ಸಮಯವನ್ನು ನ್ಯಾಯಾಲಯ 4 ವಾರಗಳ ಕಾಲ ವಿಸ್ತರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

