ಬಾಂಬ್ ರಾಜಕೀಯ: ಸಿದ್ದು, ವಿಶ್ವನಾಥ್ ಬಂಧನಕ್ಕೆ ಈಶ್ವರಪ್ಪ ಆಗ್ರಹ

ಬೆಂಗಳೂರು: ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಘಟನೆಯ ಹಿಂದೆ ಆರ್ಎಸ್ಎಸ್ ಕೈವಾಡ ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ ಸಂಸದ ಎಚ್.ವಿಶ್ವನಾಥ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಬಂಧಿಸಬೇಕು ಎಂದು ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ಆಗ್ರಹಿಸಿದ್ದಾರೆ.
ಬಾಂಬ್ ಸ್ಫೋಟಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಈ ಘಟನೆಯನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳಲಿದೆ ಎಂದು ಹೇಳಿದರು. ಅವರ ಈ ಹೇಳಿಕೆಯನ್ನು ನಾನು ತೀವ್ರ ಖಂಡಿಸುತ್ತೇನೆ. ವಿಧಾನಸಭೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಉಗ್ರರು ಎಸಗಿದ ದುಷ್ಕೃತ್ಯವನ್ನು ಯಾವುದೇ ಕಾರಣಕ್ಕೂ ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುವುದಿಲ್ಲ ಎಂದರು.
ಇದೇ ವೇಳೆ ಕಾಂಗ್ರೆಸ್ ನಾಯಕರ ಹೇಳಿಕೆಗಳ ಬಗ್ಗೆ ಕಿಡಿಕಾರಿದ ಈಶ್ವರಪ್ಪ, ನಾಯಕರು ನಾಲಿಗೆ ಬಿಗಿ ಹಿಡಿದು ಮಾತನಾಡಲಿ ಎಂದಿದ್ದಾರೆ.
ಮಾಲೇಗಾಂವ ಸ್ಫೋಟದ ಮಾದರಿಯಲ್ಲೇ ಈ ಸ್ಫೋಟ ಸಂಭವಿಸಿದೆ. ಅದೂ ಮಲ್ಲೇಶ್ವರಂನ ಬಿಜೆಪಿ ಕೇಂದ್ರ ಕಚೇರಿ ಸಮೀಪದಲ್ಲೇ ನಡೆದಿದ್ದು, ಬಾಂಬ್ ಸ್ಫೋಟದ ಹಿಂದೆ ಆರ್ಎಸ್ಎಸ್ ಕೈವಾಡ ತಳ್ಳಿ ಹಾಕುವಂತಿಲ್ಲ ಎಂದು ವಿಶ್ವನಾಥ್ ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


