ಖೇಣಿ ನಾಮಪತ್ರ ಸ್ವೀಕಾರ
ಬೀದರ್: ವಿವಾದಕ್ಕೆ ಕಾರಣವಾಗಿದ್ದ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಅವರ ನಾಮಪತ್ರವನ್ನು ಕೊನೆಗೂ ರಾಜ್ಯ ಚುನಾವಣಾ ಆಯೋಗ ಸ್ವೀಕಾರ ಮಾಡಿಕೊಂಡಿದೆ.
ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಅವರು ಬೀದರ್ ಕ್ಷೇತ್ರದಿಂದ ಕರ್ನಾಟಕ ಮಕ್ಕಳ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದರು. ಅದೇ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮತ್ತೋರ್ವ ಅಭ್ಯರ್ಥಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಂ ಅವರು, ಅಶೋಕ್ ಖೇಣಿ ಅವರು ಭಾರತದ ಪ್ರಜೆಯಲ್ಲ ಎಂದು ಆರೋಪಿಸಿ, ಅವರ ನಾಮಪತ್ರ ವಜಾಗೊಳಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದರು.
ಅಬ್ರಹಂ ಅವರ ಮನವಿಯ ಮೇರೆಗೆ, ರಾಜ್ಯ ಚುನಾವಣಾ ಆಯೋಗ ಸೂಕ್ತ ದಾಖಲೆ ಸಲ್ಲಿಸುವಂತೆ ಖೇಣಿ ಅವರಿಗೆ ಸೂಚಿಸಿತ್ತು. ಅದರಂತೆ ಇಂದು ಸಂಜೆ ಖೇಣಿ ಅವರು ತಮ್ಮ ದಾಖಲಾತಿಗಳ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದರು. ದಾಖಲೆಗಳನ್ನು ಪರಿಶೀಲಿಸಿದ ಆಯೋಗ ಖೇಣಿ ಅವರ ನಾಮಪತ್ರವನ್ನು ಸ್ವೀಕಾರ ಮಾಡಿಕೊಂಡಿದೆ.
ನಾಮಪತ್ರ ಸ್ವೀಕಾರದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ಖೇಣಿ ಅವರು, ಜೆಡಿಎಸ್ ವರಿಷ್ಠ ದೇವೇಗೌಡ ಅವರ ವಿರುದ್ಧ ಹರಿಹಾಯ್ದರು. ಈ ವಿವಾದಕ್ಕೆ ದೇವೇಗೌಡರೇ ಕಾರಣ ಎಂದು ಹೇಳಿದ ಖೇಣಿ, ಬೇರೆಯವರೊಂದಿಗೆ ವಿನಾಕಾರಣ ದೂರು ಕೊಡಿಸುತ್ತಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ ಜಾತಿ ರಾಜಕಾರಣ ಮಾಡಬೇಡಿ ಎಂದು ಖೇಣಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

