ನಾಳೆಯಿಂದ ಪ್ರಚಾರಕ್ಕೆ ಎಸ್.ಎಂ.ಕೃಷ್ಣಾ

ಬೆಂಗಳೂರು: ಇಷ್ಟು ದಿನ ತೆರೆಮರೆಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಅವರು ನಾಳೆಯಿಂದ ಅಧಿಕೃತವಾಗಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ತೆರೆಮರೆಗೆ ಸರಿದಿದ್ದ ಕೃಷ್ಣಾ ಅವರು, ನಾಳೆಯಿಂದ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಮಂಡ್ಯ ಕ್ಷೇತ್ರದಲ್ಲಿ ಉಂಟಾಗಿದ್ದ ಬಂಡಾಯ ಇಂದು ಶಮನಗೊಳ್ಳುತ್ತಿದ್ದಂತೆಯೇ ಕೃಷ್ಣಾ ಅವರು ಪ್ರಚಾರದಲ್ಲಿ ತೊಡಗುವ ಮಾಹಿತಿ ಬಹಿರಂಗಗೊಂಡಿದೆ.
ತಮ್ಮ ಬೆಂಬಲಿಗ ಶ್ರೀರಂಗಪಟ್ಟಣದ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ರವೀಂದ್ರ ಶ್ರೀಕಂಠಯ್ಯ ಅವರಿಗೆ ಟಿಕೆಟ್ ನೀಡಿ, ನಟ ಅಂಬರೀಶ್ ಅವರ ಒತ್ತಡದಿಂದಾಗಿ ಟಿಕೆಟ್ ವಾಪಸ್ ಪಡೆದಿದ್ದ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಕೃಷ್ಣಾ ಮುನಿಸಿಕೊಂಡಿದ್ದರು. ಹೀಗಾಗಿಯೇ ಅವರು ಪಕ್ಷದ ಯಾವುದೇ ಸಭೆ ಸಮಾರಂಭಗಳಲ್ಲಿ ಮತ್ತು ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿರಲಿಲ್ಲ. ಆದರೆ ಇಂದು ಕಾಂಗ್ರೆಸ್ ಹೈಕಮಾಂಡ್ ನಡೆಸಿದ ಸಂಧಾನ ಕಾರ್ಯ ಯಶಸ್ವಿಯಾಗಿದ್ದು, ಕೃಷ್ಣಾ ನಾಳೆಯಿಂದ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ.
'ಪಕ್ಷದಲ್ಲಿದ್ದ ಎಲ್ಲಾ ಗೊಂದಲಗಳಿಗೂ ಹೈ ಕಮಾಂಡ್ ತೆರೆ ಎಳೆದಿದ್ದು, ನಾಳೆ ವಿಜಯನಗರ ಕ್ಷೇತ್ರದಿಂದ ಎಸ್.ಎಂ ಕೃಷ್ಣಾ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ' ಎಂದು ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷ ವೀರಣ್ಣ ಮತ್ತಿಕಟ್ಟಿ ತಿಳಿಸಿದ್ದಾರೆ.
ಅಲ್ಲದೆ ಇಂದು ಸ್ವತಃ ಕೃಷ್ಣಾ ಅವರೇ ತಮ್ಮ ನಿವಾಸದಲ್ಲಿ ಮಾತನಾಡಿ ಪ್ರಚಾರ ಕಾರ್ಯದಲ್ಲಿ ತೊಡಗುವ ವಿಷಯವನ್ನು ಸ್ಫಷ್ಟಪಡಿಸಿದರು. 'ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಈ ಹಿಂದೆ ಹೈ ಕಮಾಂಡ್ ನೀಡಿದ್ದ ಎಲ್ಲ ಜವಾಬ್ದಾರಿಗಳನ್ನು ನಿಷ್ಠೆಯಿಂದ ನಿಭಾಯಿಸಿದ್ದೇನೆ ಮುಂದೆಯೂ ನಿಭಾಯಿಸುತ್ತೇನೆ. ಕಾಂಗ್ರೆಸ್ ಪಕ್ಷ ಯಾವತ್ತೂ ನನ್ನನ್ನು ಕಡೆಗಣಿಸಿಲ್ಲ. ನಾನು ನಾಳೆಯಿಂದ ಪ್ರಚಾರ ಕಾರ್ಯದಲ್ಲಿ ತೊಡಗುತ್ತೇನೆ' ಎಂದು ಕೃಷ್ಣಾ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


