ಬೋಸ್ಟನ್ ಬಾಂಬ್ ದಾಳಿ: ಪ್ರಮುಖ ಆರೋಪಿ ಬಂಧನ

ಬೋಸ್ಟನ್: ಅಮೆರಿಕದ ಬೋಸ್ಟನ್ನಲ್ಲಿ ನಡೆದ ಮ್ಯಾರಥಾನ್ ವೇಳೆಯಲ್ಲಿ ನಡೆದ ಬಾಂಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬೋಸ್ಟನ್ ಪೊಲೀಸರು ಪ್ರಮುಖ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೋಸ್ಟನ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಎಂದು ಹೇಳಲಾಗುತ್ತಿದ್ದು, ನಿನ್ನೆ ಶೂಟೌಟ್ನಲ್ಲಿ ಅಸುನೀಗಿದ ತಮರ್ಲನ್ ತ್ಸರ್ನೇವ್ ಎಂಬ ಮತ್ತೋರ್ವ ಆರೋಪಿಯ ಸಹೋದರ ಎಂದು ಹೇಳಲಾಗುತ್ತಿದೆ. ನಿನ್ನೆ ವಾಟರ್ಟೌನ್ನಲ್ಲಿ ಶಂಕಿತ ಆರೋಪಿಗಳು ಅಡಗಿರುವ ಮಾಹಿತಿ ತಿಳಿದ ಪೊಲೀಸರು ಅವರ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸಿದರು. ಆದರೆ ಆರೋಪಿಗಳು ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಿದಾಗ ಬೇರೆ ದಾರಿ ಇಲ್ಲದೆ ಪೊಲೀಸರು ಅವರ ಮೇಲೆ ಗುಂಡು ಹಾರಿಸಿದರು. ಈ ವೇಳೆ ತಮರ್ಲನ್ಗೆ ಗುಂಡು ತಗುಲಿ ಆತ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದ. ಆದರೆ ಆತನ ಸಹೋದರ ಸ್ಥಳದಿಂದ ಪರಾರಿಯಾಗಿದ್ದ.
ಇಂದು ಆದರ ಮುಂದುವರೆದ ಕಾರ್ಯಾಚರಣೆಯಲ್ಲಿ ಕಾರಿನಲ್ಲಿ ಪರಾರಿಯಾಗುತ್ತಿದ್ದ ಆತನ ಕಿರಿಯ ಸಹೋದರ ಡ್ಝೋಖರ್ ತ್ಸರ್ನೇವ್ ಸಿಕ್ಕಿಬಿದ್ದಿದ್ದಾನೆ. ಸತತ 2 ಗಂಟೆಗಳ ಹಿಂಬಾಲಿಕೆ ನಂತರ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳು ದಕ್ಷಿಣ ರಷ್ಯಾದ ಚೆಚನ್ಯಾ ಉಗ್ರ ಸಮೂಹಕ್ಕೆ ಸೇರಿದವರಾಗಿರಬಹುದು ಎಂದು ಪೊಲೀಸರು ಶಂಕಿಸುತ್ತಿದ್ದಾರೆ. ತನಿಖೆ ಮುಂದುವರೆದಿದ್ದು, ಆರೋಪಿಯನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
ಕಳೆದ ಸೋಮವಾರ ಬೋಸ್ಟನ್ನಲ್ಲಿ ನಡೆಯುತ್ತಿದ್ದ ವಾರ್ಷಿಕ ಮ್ಯಾರಥಾನ್ ಕ್ರೀಡೆಯ ವೇಳೆ ಪ್ರೆಶರ್ ಕುಕ್ಕರ್ನಲ್ಲಿಟ್ಟಿದ್ದ ಅವಳಿ ಬಾಂಬ್ಗಳು, ಸ್ಫೋಟಗೊಂಡು ಒಂದು ಮಗು ಸೇರಿ ಮೂವರು ಸಾವನ್ನಪ್ಪಿದ್ದರು. ಅಲ್ಲದೆ ಘಟನೆಯಲ್ಲಿ ಹಲವು ಕ್ರೀಡಾಪಟುಗಳು ಸೇರಿ ಸುಮಾರು 180 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


