ಈಗಿನ ಸುದ್ದಿ

ರೆಬಲ್ ಸ್ಟಾರ್‌ಗೇ ರೆಬಲ್ ಆಗಿದ್ದ ರವೀಂದ್ರ ನಾಮಪತ್ರ ವಾಪಸ್

Published On :

ಮಂಡ್ಯ: ರೆಬಲ್ ಸ್ಟಾರ್ ಅಂಬರೀಷ್ ಅವರ ವಿರುದ್ಧವೇ ಕಾಂಗ್ರೆಸ್ ರೆಬಲ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರವೀಂದ್ರ ಶ್ರೀಕಂಠಯ್ಯ ಅವರು ಶನಿವಾರ ತಮ್ಮ ನಾಪಪತ್ರ ಹಿಂಪಡೆದಿದ್ದಾರೆ. ಆದರೆ ಶ್ರೀರಂಗಪಟ್ಟಣದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

ನಾಮಪತ್ರ ಹಿಂಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರವೀಂದ್ರ ಅವರು, ಅಂಬರೀಷ್ ಅವರ ಅನುಕೂಲಕ್ಕಾಗಿ ನಾನು ನಾಮಪತ್ರ ಹಿಂಪಡೆಯುತ್ತಿದ್ದೇನೆ. ಅವರು ನಾನು ಬೆಳೆಯುವ ಅವಕಾಶ ತಪ್ಪಿಸಿದರು. ಆದರೆ ನಾನು ಆ ರೀತಿ ಮಾಡಲು ಸಾಧ್ಯವಿಲ್ಲ. ಅವರ ನಡುವಳಿಕೆಯಿಂದ ನನಗೆ ಬೇಸರವಾಗಿದೆ ಎಂದಿದ್ದಾರೆ.

ಇದೇ ವೇಳೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆತ್ಮಾನಂದ ಅವರ ರಾಜಿನಾಮೆ ಬಗ್ಗೆ ಪ್ರತಿಕ್ರಿಯಿಸಿದ ರವೀಂದ್ರ, ಅಂಬರೀಷ್ ಅವರಿಗೆ 'ನಾನು ಅನ್ನೊ ಅಹಂ' ಇದೆ. ಅವರ ಈ ನಡುವಳಿಕೆಯಿಂದಲೇ ಇಷ್ಟೆಲ್ಲಾ ಬೆಳವಣಿಗೆಗೆ ಕಾರಣವಾಗಿದೆ. ಈ ಎಲ್ಲ ಬೆಳವಣಿಗೆಯಿಂದ ಆತ್ಮಾನಂದ ಅವರು ರಾಜಿನಾಮೆ ನೀಡಿದ್ದಾರೆ ಎಂದು ಹೇಳಿದರು.

ಅಂಬರೀಷ್ ಅವರ ವರ್ತನೆಯಿಂದ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ದುಃಸ್ಥಿತಿ ಬಂದಿದೆ. ಈ ತರಹದ ನಾಯಕರನ್ನು ನಾನು ಜಿಲ್ಲೆಯಲ್ಲಿ ನೋಡಿಲ್ಲ ಎಂದು ರವೀಂದ್ರ, ಅಂಬಿ ಬಗ್ಗೆ ತೀವ್ರ ಅಸಮಾದಾನ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.