ಈಗಿನ ಸುದ್ದಿ

ಸಿಯಾಚಿನ್ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ; 72 ಸಾವು

Published On :



ಬೀಚಿಂಗ್: ಚೀನಾದ ನೈಋತ್ಯ ಭಾಗದಲ್ಲಿರುವ ಸಿಯಾಚಿನ್ ಪ್ರಾಂತ್ಯದಲ್ಲಿ ಶನಿವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 72 ಮಂದಿ ಸಾವನ್ನಪ್ಪಿದ್ದಾರೆ. ಅದೇ ವೇಳೆ 600ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

ಭೂಕಂಪನದ ತೀವ್ರತೆ 7.0 ಆಗ್ಗಿದ್ದು, ಸ್ಥಳೀಯ ಕಾಲಾಮಾನ ಬೆಳಗ್ಗೆ 8.02 ಗಂಟೆಗೆ ಭೂಕಂಪ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಭೂಕಂಪನದ ದೃಶ್ಯಗಳನ್ನು ಸಿಸಿಟಿವಿಯಲ್ಲಿ ಸೆರೆ ಹಿಡಿದಿದ್ದು, ಭೂಕಂಪದ ವೇಳೆ ಬಹು ಮಹಡಿ ಕಟ್ಟಡಗಳು ಕಂಪಿಸಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುಮಾರು 20 ಸೆಕೆಂಡುಗಳ ವರೆಗೆ ಕಟ್ಟಡಗಳು ಕಂಪಿಸಿವೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಲಿಶಾನ್ ನಗರ, ಚೋಂಗ್ವಿಂಗ್ ಮುನಿಸಿಪಾಲಿಟಿ ,ಗೈಜೌ, ಗಾನ್ಸು, ಶಾಂಕ್ಸಿ ಮತ್ತು ಯುನನ್ ಪ್ರದೇಶಗಳಲ್ಲೂ ಭೂಕಂಪ ಅನುಭವಕ್ಕೆ ಬಂದಿದೆ. ಭೂಕಂಪದ ಕಾರಣ ಚೆಂಗ್ಡು  ವಿಮಾನ ನಿಲ್ದಾಣಕ್ಕೆ ಹಾನಿ ಸಂಭವಿಸಿದ್ದು, ವಿಮಾನ ಹಾರಾಟ ರದ್ದುಗೊಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.