ಬಾಲಕಿ ಮೇಲೆ ಅತ್ಯಾಚಾರ: ಕಠಿಣ ಕ್ರಮಕ್ಕೆ ಸೋನಿಯಾ ಆಗ್ರಹ

ನವದೆಹಲಿ: ದೆಹಲಿಯಲ್ಲಿ ನಡೆದ 5 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಖಂಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
5 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದಿಂದಾಗಿ ಇಡೀ ದೆಹಲಿ ಪ್ರಕ್ಷುಬ್ದಗೊಂಡಿದ್ದು, 'ನಿರ್ಭಯಾ' ಪ್ರಕರಣವನ್ನು ನೆನಪಿಸುತ್ತಿದೆ. ಪ್ರಕರಣ ಸಂಬಂಧ ದೆಹಲಿ ಪೊಲೀಸರು ಈಗಾಗಲೇ ಮನೋಜ್ ಕುಮಾರ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದು, ಭಾರಿ ಭದ್ರತೆಯೊಂದಿಗೆ ಆತನನ್ನು ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದ ಬಗ್ಗೆ ಇದೇ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಅತ್ಯಾಚಾರವನ್ನು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೆ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
5 ವರ್ಷದ ಪುಟ್ಟ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣ, ದೆಹಲಿ ಜನತೆಯನ್ನು ದಿಗ್ಬ್ರಾಂತರಾಗುವಂತೆ ಮಾಡಿದೆ. ಅಲ್ಲದೆ ಪ್ರಕರಣ ಮುಚ್ಚಿಹಾಕಲು ಬಾಲಕಿಯ ತಂದೆಗೆ 2000 ಸಾವಿರ ರುಪಾಯಿ ನೀಡುವುದಾಗಿ ಹೇಳಿದ್ದ ಪೊಲೀಸರ ವರ್ತನೆ ಜನತೆಯನ್ನು ಕೆರಳಿಸಿದೆ. ಹೀಗಾಗಿಯೇ ಪ್ರಕರಣವನ್ನು ಖಂಡಿಸಿ ದೆಹಲಿ ಜನತೆ, ಮತ್ತೆ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಪೊಲೀಸರಿಗೆ ಹಣದ ನೋಟುಗಳನ್ನು ತೋರಿಸಿ, ಪೊಲೀಸರ ವಿರುದ್ಧ ಪ್ರತಿಭಟನಾ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಈ ನಡುವೆ ನಿನ್ನೆ ಪ್ರತಿಭಟನಾಕಾರರು ಬಾಲಕಿಯನ್ನು ದಾಖಲಿಸಿರುವ ಸರ್ಕಾರಿ ಆಸ್ಪತ್ರೆ 'ಎಐಐಎಂಎಸ್'ಗೆ ಧಾವಿಸಿ, ಪೊಲೀಸರ ವಿರುದ್ಧ ಪ್ರತಿಭಟನೆ ಕೂಗುತ್ತಿದ್ದಾಗ ಎಸಿಪಿ ನೀರಜ್ ಕುಮಾರ್ ಪ್ರತಿಭಟನಾ ನಿರತ ಯುವತಿಯ ಕಪಾಳಕ್ಕೆ ಹೊಡೆದಿದ್ದರು. ಎಸಿಪಿ ವಿರುದ್ಧ ಗೃಹ ಇಲಾಖೆ ಇಂದು ಕ್ರಮ ಕೈಗೊಂಡಿದ್ದು, ನೀರಜ್ ಕುಮಾರ್ ಅವರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ ಎಂದು ಕೇಂದ್ರ ಗೃಹ ಇಲಾಖೆಯ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


