ಈಗಿನ ಸುದ್ದಿ

ಅಕ್ರಮ ಶಸ್ತ್ರಾಸ್ತ್ರ: ತೀರ್ಪು ಪುನರ್‌ಪರಿಶೀಲನೆಗೆ ದತ್ ಮನವಿ

ಅಕ್ರಮ ಶಸ್ತ್ರಾಸ್ತ್ರ: ತೀರ್ಪು ಪುನರ್‌ಪರಿಶೀಲನೆಗೆ ದತ್ ಮನವಿ
Published On :

ನವದೆಹಲಿ: ಅಕ್ರಮ ಶಸ್ತ್ರಾಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಂಜಯ್ ದತ್ ಅವರು ತಮ್ಮ ವಿರುದ್ಧ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಸುಪ್ರೀಂಕೋರ್ಟ್‌ನಲ್ಲಿ ಮನವಿ ಸಲ್ಲಿಸಲಿದ್ದಾರೆ.

1993ರ ಮುಂಬೈ ಸರಣಿ ಸ್ಫೋಟದ ವೇಳೆ ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶರಣಾಗಲು 4 ವಾರಗಳ ಕಾಲಾವಕಾಶಕ್ಕೆ ಕೇಳಿದ್ದ ಸಂಜಯ್‌ದತ್ ನ್ಯಾಯಾಲಯ ಶರಣಾಗತಿ ಗಡುವು ವಿಸ್ತರಿಸುತ್ತಿದ್ದಂತೆಯೇ, ಇತ್ತ ತಮ್ಮ ವಿರುದ್ಧ ನ್ಯಾಯಾಲಯ ನೀಡಿದ್ದ ತೀರ್ಪನ್ನು ಪುನರ್‌ಪರಿಶೀಲಿಸುವಂತೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ದೆಹಲಿಯ ಖ್ಯಾತನಾಮ ವಕೀಲರು ದತ್ ಅವರ ಪರವಾಗಿ ನಾಳೆ ಸುಪ್ರೀಂಕೋರ್ಟ್‌ನಲ್ಲಿ ಪುನರ್‌ಪರಿಶೀಲನಾ ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ನ್ಯಾಯಾಲಯ ತೀರ್ಪು ನೀಡಿದ 30 ದಿನಗಳ ಒಳಗಾಗಿ ಪುನರ್‌ಪರಿಶೀನಾ ಅರ್ಜಿಯನ್ನು ಸಲ್ಲಿಸಬೇಕು. ಗಡುವು ಮೀರಿದರೆ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸುವ ಸಾಧ್ಯತೆ ಇದೆ ಎಂದು ವಕೀಲರೊಬ್ಬರು ತಿಳಿಸಿದ್ದಾರೆ. ಕಳೆದ ಮಾರ್ಚ್ 21ರಂದು ಸಂಜಯ್ ದತ್ ಅಪರಾಧಿ ಎಂದು ತೀರ್ಮಾನಿಸಿದ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಅಂದರೆ ದತ್ ವಿರುದ್ಧ ನ್ಯಾಯಾಲಯ ತೀರ್ಪು ನೀಡಿ ಇಂದಿಗೆ ಸರಿಯಾಗಿ ಒಂದು ತಿಂಗಳಾಯಿತು. ಆದರೆ ನಾಳೆ ದತ್ ಪುನರ್‌ಪರಿಶೀಲನಾ ಅರ್ಜಿ ಸಲ್ಲಿಸಲು ಮುಂದಾಗಿದ್ದು, ನ್ಯಾಯಾಲಯ ದತ್ ಅವರ ಅರ್ಜಿಯನ್ನು ಸ್ವೀಕರಿಸುತ್ತದೆಯೋ ಅಥವಾ ಅರ್ಜಿಯನ್ನು ವಜಾಗೊಳಿಸುತ್ತದೆಯೋ ಕಾದು ನೋಡಬೇಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.