ಈಗಿನ ಸುದ್ದಿ

ಅಭಿವೃದ್ಧಿಗಾಗಿ ಮತ ನೀಡಿ: ಸುಷ್ಮಾ

ಅಭಿವೃದ್ಧಿಗಾಗಿ ಮತ ನೀಡಿ: ಸುಷ್ಮಾ
Published On :

ಬೆಂಗಳೂರು: ಮಲ್ಲೇಶ್ವರಂನಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ 'ಅಭಿವೃದ್ಧಿಗಾಗಿ ಮತ ನೀಡಿ' ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರು ಹೇಳಿದರು.

ಚುನಾವಣೆ ದಿನ ಹತ್ತಿರವಾಗುತ್ತಿದ್ದಂತೆ ಆಡಳಿತಾರೂಢ ಬಿಜೆಪಿಯು ಬೀರುಸಿನ ಪ್ರಚಾರ ಕೈಗೊಂಡಿದೆ. ಮಲ್ಲೇಶ್ವರಂನಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಹಾಗು ಕೆಜೆಪಿ ವಿರುದ್ದ ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ ಸುಷ್ಮಾ ಅವರು, ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ದಾಖಲೆ ನಿರ್ಮಿಸಿದೆ. ಭೂಮಿ, ಅಕಾಶ, ಪಾತಳದಲ್ಲೂ ಕಾಂಗ್ರೆಸ್ ಭ್ರಷ್ಟಾಚಾರದ ಹಸ್ತ ಚಾಚಿದೆ. ಉತ್ತಮ ಸರ್ಕಾರ ನೀಡುವಲ್ಲಿ ವಿಫಲವಾಗಿರುವ ಕಾಂಗ್ರೆಸ್ ಅನ್ನು ಬೆಂಬಲಿಸಬಾರದು. ದೇಶದಲ್ಲಿ ವಿಧ್ವಂಸಕ ಕೃತ್ಯಗಳು ನಡೆಯುತ್ತಿದೆ. ಭಯೋತ್ಪಾದನೆಯನ್ನು ನಿಗ್ರಹಿಸುವ ಕಾರ್ಯದಲ್ಲಿ ಕಾಂಗ್ರೆಸ್ ಸೋತಿದೆ ಎಂದು ಕಿಡಿಕಾರಿದ್ದಾರೆ.

ಯಡಿಯೂರಪ್ಪ ಸ್ಥಾಪಿಸಿರುವ ಕೆಜೆಪಿ ಪಕ್ಷಕ್ಕೆ ಉಳಿಗಾಲವಿಲ್ಲಿ. ಶತಾಯಗತಾಯ ಹೋರಾಡಿದರು ಕೆಜೆಪಿ ಸ್ವತಂತ್ರ ಸರಕಾರ ಸ್ಥಾಪಿಸಲು ಸಾಧ್ಯವಿಲ್ಲ ಎಂದ ಅವರು, ಕೆಜೆಪಿಯೊಂದಿಗೆ ಯಾವುದೇ ಕಾರಣಕ್ಕೂ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆ ಇಲ್ಲವೆ ಇಲ್ಲ ಎಂದು ಘಂಟಾಘೋಷವಾಗಿ ಹೇಳಿದ್ದಾರೆ. ಇನ್ನು ಜೆಡಿಎಸ್ ವಚನ ಭ್ರಷ್ಟಪಕ್ಷ ಎಂದು ಹರಿಹಾಯ್ದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.