ಬೆದರಿಕೆ ಪ್ರಕರಣ: ಸಂಜಯ್‌ದತ್‌ಗೆ ಜಾಮೀನು

ಮುಂಬೈ: ನಿರ್ಮಾಪಕನಿಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬಾಲಿವುಡ್ ನಟ ಸಂಜಯ್ ದತ್‌ಗೆ ಜಾಮೀನು ಮಂಜೂರು ಮಾಡಿದೆ.
ಬಾಲಿವುಡ್ ಚಿತ್ರ ನಿರ್ಮಾಪಕ ಶಕೀಲ್ ನೂರಾನಿಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡುತ್ತಿದ್ದಂತೆಯೇ, ನಟ ಸಂಜಯ್ ದತ್ ಇಂದು ಸಂಜೆ ನ್ಯಾಯಾಲಯಕ್ಕೆ ಹಾಜರಾದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಸಂಜಯ್ ದತ್‌ಗೆ 10 ಸಾವಿರ ರು.ಗಳ ಭದ್ರತಾ ಠೇವಣಿಯ ಮೇಲೆ ಷರತ್ತು ಬದ್ಧ ಜಾಮೀನು ನೀಡಿದೆ.
2002ರಲ್ಲಿ 'ಜಾನ್ ಕೀ ಬಾಜಿ' ಎಂಬ ಚಿತ್ರದಲ್ಲಿ ನಟಿಸಲು ನಟ ಸಂಜಯ್ ದತ್ ಅವರು ನಿರ್ಮಾಪಕ ನೂರಾನಿಯಿಂದ 50 ಸಾವಿರ ರು.ಗಳನ್ನು ಮುಂಗಡವಾಗಿ ಪಡೆದುಕೊಂಡಿದ್ದರು. ಆದರೆ ಚಿತ್ರದ ಚಿತ್ರೀಕರಣ ಅರ್ಧ ಮುಗಿದ ನಂತರ ಖ್ಯಾತೆ ತೆಗೆದಿದ್ದ ಸಂಜಯದತ್, ಚಿತ್ರದಲ್ಲಿ ತಾವು ನಟಿಸುವುದಿಲ್ಲ ಎಂದು ಹೇಳಿ ಚಿತ್ರದಿಂದ ಹೊರಬಂದಿದ್ದರು. ಅಷ್ಟೇ ಅಲ್ಲದೆ ನಿರ್ಮಾಪಕರು ನೀಡಿದ್ದ ಹಣವನ್ನು ವಾಪಸ್ ನೀಡುವುದಿಲ್ಲ ಎಂದು ನಿರ್ಮಾಪಕ ನೂರಾನಿಗೆ ಬೆದರಿಕೆ ಹಾಕಿದ್ದರು.
ಚಿತ್ರ ನಿರ್ಮಾಪಕ ನೂರಾನಿ ಅವರು ಸಂಜಯ್ ದತ್ ವಿರುದ್ಧ ನ್ಯಾಯಾಲಯದಲ್ಲಿ ಬೆದರಿಕೆ ಪ್ರಕರಣ ದಾಖಲು ಮಾಡಿ, ತಮಗಾದ ನಷ್ಟಕ್ಕೆ ಬದಲಾಗಿ 2.03 ಕೋಟಿ ರು.ಗಳನ್ನು ನಷ್ಟ ಪರಿಹಾರವಾಗಿ ದತ್ ಅವರಿಂದ ಕೊಡಿಸಬೇಕು ಎಂದು ನ್ಯಾಯಾಲಯವನ್ನು ಕೋರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಅಂಧೇರಿ ನ್ಯಾಯಾಲಯ ಸಾಕಷ್ಟು ಬಾರಿ ಸಂಜಯದತ್‌ಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿತ್ತು ಆದರೆ ಸಂಜಯ್ ಒಮ್ಮೆಯೂ ವಿಚಾರಣೆಗೆ ಹಾಜರಾಗಿರಲಿಲ್ಲ. ಇಂದು ಅಂಧೇರಿ ನ್ಯಾಯಾಲಯ ಸಂಜಯ್ ದತ್ ವಿರುದ್ಧ ಜಾಮೀನುರಹಿತ ವಾರೆಂಟ್ ಜಾರಿ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


