ಕ್ರಿಸ್ ಗೇಲ್ ಅತಿ ವೇಗದ ಶತಕದ ದಾಖಲೆ

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಆರ್‌ಸಿಬಿ ಆಟಗಾರ ಕ್ರಿಸ್ ಗೇಲ್ ಅವರು ಕ್ರಿಕೆಟ್ ಇತಿಹಾಸದಲ್ಲೇ ಅತಿ ವೇಗದ ಶತಕ ದಾಖಲಿಸುವ ಮೂಲಕ ಮಂಗಳವಾರ ಹೊಸ ದಾಖಲೆ ನಿರ್ಮಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪುಣೆ ವಾರಿಯರ್ಸ್ ವಿರುದ್ದ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಕ್ರಿಸ್ ಗೇಲ್ 30 ಎಸೆತಗಳಲ್ಲಿ 11 ಸಿಕ್ಸ್, 8 ಬೌಂಡರಿ ಸಿಡಿಸುವುದರೊಂದಿಗೆ 102 ರನ್ ಗಳಿಸಿ ವಿಶ್ವ ದಾಖಲೆ ಬರೆದರು.
ಈ ಮುಂಚೆ ಮುಂಬೈ ವಿರುದ್ಧ ಯೂಸುಫ್ ಪಠಾಣ್ ಅವರು 37 ಎಸೆತಗಳಲ್ಲಿ ಶತಕ ಗಳಿಸಿದ್ದರು. ಅದೇ ರೀತಿ ಟಿ20ಯಲ್ಲಿ ಆಸ್ಟ್ರೇಲಿಯಾದ ಆಂಡ್ರ್ಯೂ ಸೈಮಂಡ್ಸ್ ಇಂಗ್ಲೀಷ್ ಕೌಂಟಿಯಲ್ಲಿ ಕೆಂಟ್ ತಂಡದ ಪರ ಕೇವಲ 34 ಎಸೆತಗಳಲ್ಲಿ ಶಕತ ಗಳಿಸಿದ್ದು ದಾಖಲೆಯಾಗಿತ್ತು. ಇದೀಗ ಆ ದಾಖಲೆಯನ್ನು ಕ್ರಿಸ್ ಗೇಲ್ ಮುರಿದಿದ್ದಾರೆ.
ಕ್ರಿಸ್ ಗೇಲ್ (167) ಅವರ ದಾಖಲೆಯ ಶತಕೊಂದಿಗೆ ಆರ್‌ಸಿಬಿ ತಂಡ ದಾಖಲೆಯ 264 ರನ್‌ಗಳ ಭಾರಿ ಮೊತ್ತವನ್ನು ಪೇರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


