ಈಗಿನ ಸುದ್ದಿ

ಪಾಕಿಸ್ತಾನ ಸೇರಿದಂತೆ ಉ.ಭಾರತದ ಹಲವೆಡೆ ಭೂಕಂಪ

Published On :

ನವದೆಹಲಿ: ಪಾಕಿಸ್ತಾನ ಮತ್ತು ಉತ್ತರ ಭಾರತದ ಹಲವೆಡೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.7ರಷ್ಟು ತೀವ್ರತೆ ದಾಖಲಾಗಿದೆ.

ಪಾಕಿಸ್ತಾನದ ಜಲೀಲಾಬಾದ್‌ನಿಂದ 16 ಮೈಲಿ ದೂರದಲ್ಲಿ ಭೂಕಂಪನದ ಕೇಂದ್ರ ಬಿಂದುವೆಂದು ಮೂಲಗಳು ತಿಳಿಸಿವೆ. ಪಾಕಿಸ್ತಾನದ ಪೇಶಾವರ, ಸ್ವಾತ್ ಕಣಿವೆ, ಲಾಹೋರ್ ಮತ್ತು ಇಸ್ಲಾಮಾಬಾದ್‌ನಲ್ಲಿ ಭೂಕಂಪ ಸಂಭವಿಸಿದ್ದು, ಮನೆ ಮತ್ತು ಕಚೇರಿಗಳಲ್ಲಿದ್ದ ಜನರು ಭಯಭೀತಗೊಂಡು ಹೊರಗೆ ಓಡಿ ಬಂದಿದ್ದಾರೆ. ನೆರೆಯ ಆಫ್ಘಾನಿಸ್ತಾನದಲ್ಲಿಯೂ ಭೂಕಂಪನ ಸಂಭವಿಸಿದ್ದು, ಹಿಂದೂಖುಷ್ ಪ್ರದೇಶ ಭೂಕಂಪನದ ಕೇಂದ್ರಬಿಂದು ಎಂದು ತಿಳಿದು ಬಂದಿದೆ.

ಭಾರತದಲ್ಲಿಯೂ ಭೂಕಂಪನದ ಅನುಭವವಾಗಿದ್ದು, ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಮಿ ಕಂಪಿಸಿದೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರ, ಇಂಡೋಪಾಕ್ ಗಡಿ ನಿಯಂತ್ರಣ ರೇಖೆ ಬಳಿ ಇರುವ ಪೂಂಚ್ ಪ್ರಾಂತ್ಯಗಳಲ್ಲಿ ಭೂಕಂಪನದಿಂದಾಗಿ ಹಲವು ಕಟ್ಟಡಗಳು ಕುಸಿದು ಬಿದ್ದಿವೆ. ಭೂಕಂಪನದಿಂದಾಗಿ ಜಲಾಲ್‌ಬಾದಿನಲ್ಲಿ ಒಟ್ಟು 7 ಮಂದಿ ಸಾವಿಗೀಡಾಗಿದ್ದು, 15 ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ.

ಸ್ಥಳದಲ್ಲಿ ಅಗ್ನಿ ಶಾಮಕ ಪಡೆಗಳು ಧಾವಿಸಿದ್ದು, ಅವಶೇಷಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.