ಬೆಂಗಳೂರು ಸ್ಫೋಟ: ಮತ್ತೆ ಐವರು ಶಂಕಿತರ ಬಂಧನ
ಚೆನ್ನೈ: ಬೆಂಗಳೂರಿನ ಮಲ್ಲೇಶ್ವರಂನ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಬುಧವಾರ ಮತ್ತೆ ಐವರು ಶಂಕಿತ ಉಗ್ರರನ್ನು ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಇದೀಗ 11ಕ್ಕೆ ಏರಿಕೆಯಾಗಿದೆ.
ಪ್ರಕರಣ ಸಂಬಂಧ ನಿನ್ನೆಯಷ್ಟೇ ಆರು ಜನರನ್ನು ಬಂಧಿಸಿದ್ದ ಪೊಲೀಸರು, ಇಂದು ಮತ್ತೆ ಐವರನ್ನು ಚೆನ್ನೈನ ತಿರುಮಂಗಲಂ ಮತ್ತು ಮಣ್ಣಡಿ ಬಳಿ ವಶಕ್ಕೆ ತೆಗೆದುಕೊಂಡಿದ್ದಾರೆ. ಪೊಲೀಸರು ಚೆನ್ನೈನ ರಹಸ್ಯ ಸ್ಥಳದಲ್ಲಿ ಬಾಂಬ್ ತಯಾರಿಕೆ ಬಗ್ಗೆ ಈ ಶಂಕಿತ ಉಗ್ರರ ವಿಚಾರಣೆ ನಡೆಸುತ್ತಿದ್ದಾರೆ.
ನಿನ್ನೆ ಬಂಧಿಸಲಾದ ಆರು ಶಂಕಿತ ಉಗ್ರರ ಹಾಗೂ ಇಂದು ವಶಕ್ಕೆ ಪಡೆದುಕೊಂಡವರ ಮೊಬೈಲ್‌ಗಳಿಗೆ ಪರಸ್ಪರ ಕರೆಗಳು ಬಂದಿದ್ದ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಏಪ್ರಿಲ್ 17ರಂದು ಮಲ್ಲೇಶ್ವರಂನ ಬಿಜೆಪಿ ಕೇಂದ್ರ ಕಚೇರಿ ಬಳಿ ಬಾಂಬ್ ಸ್ಫೋಟಿಸಲಾಗಿತ್ತು. ಈ ಘಟನೆಯಲ್ಲಿ 16 ಮಂದಿ ತೀವ್ರವಾಗಿ ಗಾಯಗೊಂಡಿದ್ದರು. ಪ್ರಕರಣದ ತನಿಖೆ ತೀವ್ರಗೊಳಿಸಿದ ಪೊಲೀಸರು ಈವರೆಗೆ 11 ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

