ಜೆಪಿಸಿ ಅಧ್ಯಕ್ಷ ಚಾಕೊ ವಜಾಕ್ಕೆ ಪ್ರತಿಪಕ್ಷಗಳ ಆಗ್ರಹ

ನವದೆಹಲಿ: 2ಜಿ ಸ್ಪೆಕ್ಟ್ರಂ ಹಗರಣ ತನಿಖೆ ಸಂಬಂಧದ ಜಂಟಿ ಸಂಸದೀಯ ಸಮಿತಿ(ಜೆಪಿಸಿ)ಯ ಅಧ್ಯಕ್ಷ ಪಿ.ಸಿ.ಚಾಕೊ ಅವರನ್ನು ವಜಾಗೊಳಿಸಬೇಕು ಎಂದು ಪ್ರತಿಪಕ್ಷಗಳು ಗುರುವಾರ ಆಗ್ರಹಿಸಿವೆ.
ಚಾಕೊ ಅವರ ಮೇಲೆ ನಮಗೆ ನಂಬಿಕೆ ಇಲ್ಲ ಎಂದು ಹೇಳಿರುವ ಬಿಜೆಪಿ ಹಾಗೂ ಎಡ ಪಕ್ಷಗಳು, ಜೆಪಿಸಿ ಅಧ್ಯಕ್ಷ ಸ್ಥಾನದಿಂದ ಅವರನ್ನು ವಾಜಗೊಳಿಸಬೇಕು ಎಂದು ಸ್ಪೀಕರ್ ಮೀರಾ ಕುಮಾರ್ ಅವರನ್ನು ಕೇಳಿಕೊಂಡಿದ್ದಾರೆ.
ಈ ಮಧ್ಯೆ ತೃಣಮೂಲ ಕಾಂಗ್ರೆಸ್ ಸಂಸದೆ ಅಂಬಿಕಾ ಬ್ಯಾನರ್ಜಿ ನಿಧನದ ಕಾರಣ ನೀಡಿ, 2ಜಿ ಸ್ಪೆಕ್ಟ್ರಂ ಹಗರಣ ಸಂಬಂಧ ಸಿದ್ಧಪಡಿಸಲಾಗಿರುವ ಕರಡು ಪ್ರತಿಯನ್ನು ಅಂಗೀಕರಿಸುವ ಬಗ್ಗೆ ಚರ್ಚಿಸಲು ಇಂದು ಮಧ್ಯಾಹ್ನ ನಡೆಯಬೇಕಿದ್ದ ಜೆಪಿಸಿ ಸಭೆಯನ್ನು ರದ್ದು ಮಾಡಲಾಗಿದೆ. 30 ಸದಸ್ಯರನ್ನು ಹೊಂದಿರುವ ಜೆಪಿಸಿಯಲ್ಲಿ 2ಜಿ ಸ್ಪೆಕ್ಟ್ರಂ ಹಗರಣದ ವರದಿಯ ಬಗ್ಗೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ.
ಚಾಕೊ ವಿರುದ್ಧ ಹರಿಹಾಯಿದಿರುವ ಪ್ರತಿಪಕ್ಷಗಳು, ಚಾಕೊ ವರ್ತನೆ ಪಕ್ಷಪಾತ ಹಾಗೂ ಪೂರ್ವಗ್ರಹಪೀಡಿತವಾಗಿದೆ. ಅವರಿಂದ ಸತ್ಯ ಮರೆಮಾಚುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿವೆ. ಅಲ್ಲದೆ ಈ ಸಂಬಂಧ ಬಿಜೆಪಿ ಹಾಗೂ ಎಡ ಪಕ್ಷದ ನಾಯಕರು ಸ್ಪೀಕರ್ ನಿವಾಸಕ್ಕೆ ತೆರಳಿ ಚಾಕೊ ವಜಾಕ್ಕೆ ಒತ್ತಾಯಿಸಿದ್ದಾರೆ.
ಸ್ಪೀಕರ್ ಭೇಟಿ ಬಳಿಕ ಮಾತನಾಡಿದ ರಾಜ್ಯಸಭಾ ಪ್ರತಿಪಕ್ಷದ ಉಪ ನಾಯಕ ರವಿಶಂಕರ್ ಪ್ರಸಾದ್ ಅವರು, ಸ್ವಾತಂತ್ರ್ಯ ನಂತರ ಭಾರತದಲ್ಲಿ ನಡೆದ ಅತಿ ದೊಡ್ಡ ಹಗರಣ ಇದಾಗಿದೆ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಮಾತಾಡುತ್ತಿಲ್ಲ. ಹಗರಣದ ಬಗ್ಗೆ ಪ್ರಧಾನಿಯವರಿಗೆ ಮಾಹಿತಿ ಇತ್ತು ಎಂದು ಹೇಳಿದರೂ ಪ್ರಧಾನಿ ಮನಮೋಹನ್ ಸಿಂಗ್ ಅವರು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಇದಕ್ಕೆ ಪ್ರಧಾನಿ ಉತ್ತರ ನೀಡಲೆಬೇಕು ಎಂದು ಹೇಳಿದ್ದಾರೆ.
ನಾವು ಸ್ಪೀಕರ್ ಅವರನ್ನು ಭೇಟಿ ಮಾಡಿ, ಚಾಕೊ ವಜಾಕ್ಕೆ ಮನವಿ ಮಾಡಿದ್ದೇವೆ ಎಂದು ಪ್ರಸಾದ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


