ಮಹಿಳೆಯರ ಮೇಲೆ ಪೊಲೀಸರ ದೌರ್ಜನ್ಯ ಖಂಡಿನೀಯ
ನವದೆಹಲಿ: ಕಳೆದ ವಾರ ದೆಹಲಿಯಲ್ಲಿ 5ರ ಹರೆಯದ ಬಾಲಕಿಯ ಮೇಲೆ ನಡೆದ ಅತ್ಯಾಚಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದನ್ನು ಸುಪ್ರೀಂ ಕೋರ್ಟ್ ಖಂಡಿಸಿದೆ.
ಪ್ರತಿಭಟನಾ ನಿರತ ಮಹಿಳೆಯರ ಮೇಲೆ ಪೊಲೀಸರು ದೌರ್ಜನ್ಯವೆಸಗಿರುವುದು ಖಂಡನೀಯ. ಮಹಿಳೆಯರ ವಿರುದ್ಧ ದೌರ್ಜನ್ಯವೆಸಗುವ ವ್ಯಕ್ತಿ ಯಾರೇ ಆಗಿರಲಿ ಅವರಿಗೆ ನ್ಯಾಯಾಲಯ ಶಿಕ್ಷೆ ವಿಧಿಸುವುದು ಎಂದು ಗುರುವಾರ ಸುಪ್ರೀಂ ಕೋರ್ಟ್ ಹೇಳಿದೆ.
ಮಹಿಳೆ ಹಾಗು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಹೆಚ್ಚುತ್ತಿದ್ದು, ಇದಕ್ಕೆ ಕೋರ್ಟ್ ವಿಷಾದ ವ್ಯಕ್ತ ಪಡಿಸಿದೆ. ಅದೇ ವೇಳೆ ಪೊಲೀಸರು ಕೂಡಾ ಇಂಥಾ ದೌರ್ಜನ್ಯಕ್ಕೆ ಸಾಥ್ ನೀಡುತ್ತಿದ್ದರೆ ಅಂಥವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನ್ಯಾಯಾಲಯ ಹೇಳಿದೆ.
ದೆಹಲಿ, ಪಂಜಾಬ್, ಬಿಹಾರ್ ಮತ್ತು ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಪೊಲೀಸರು ಹಲ್ಲೆ ನಡೆಸಿದ ಪ್ರಕರಣವನ್ನು ಉಲ್ಲೇಖಿಸಿದ ಸುಪ್ರೀಂ, ಇಂದು ಮಹಾತ್ಮಾ ಗಾಂಧಿ ಬದುಕಿದ್ದರೆ, ಅವರು ಹಲವಾರು ಬಾರಿ ಸಾಯುತ್ತಿದ್ದರು ಎಂದು ಹೇಳಿದೆ.
ಆದಾಗ್ಯೂ, ದೆಹಲಿಯಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಹಲ್ಲೆಯ ಬಗ್ಗೆ ವಿವರಣೆ ನೀಡುವ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ದೆಹಲಿ ಪೊಲೀಸ್ ಕಮಿಷನರ್ಗೆ ಆದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

