ಮೀನುಗಾರರ ಹತ್ಯೆ: ಎನ್ಐಎಗೆ ತನಿಖಾ ಜವಾಬ್ದಾರಿ

ನವದೆಹಲಿ: ಭಾರತೀಯ ಮೀನುಗಾರರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಇಟಲಿ ನೌಕಾಪಡೆಯ ಯೋಧರಿಂದ ಹತ್ಯೆಗೊಳಗಾದ ಮೀನುಗಾರರ ಪ್ರಕರಣವನ್ನು ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ರಾಷ್ಟ್ರೀಯ ತನಿಖಾ ದಳ(ಎನ್ಐಎ)ಕ್ಕೆ ಸೂಚಿಸಿದ್ದು, ಪ್ರಕರಣದ ಪ್ರತಿದಿನದ ಬೆಳವಣಿಗೆಗಳನ್ನು ತನಿಖೆಗೊಳಪಡಿಸುವಂತೆ ಸೂಚಿಸಿದೆ.
ಈ ಸಂಬಂಧ ಇಂದು ವಿಚಾರಣೆ ನಡೆಸಿದ ಮುಖ್ಯ ನ್ಯಾ. ಅಲ್ತಮಸ್ ಕಬೀರ್ ಅವರು, 'ಪ್ರಕರಣವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದ್ದು, ಇದಕ್ಕಾಗಿ ಒಂದು ವಿಶೇಷ ತನಿಖಾ ಕೇಂದ್ರವನ್ನು ಸ್ಥಾಪಿಸಲು ಮುಂದಾಗಿದೆ. ಈ ಕೇಂದ್ರದಲ್ಲಿಯೇ ಪ್ರಕರಣ ಸಂಪೂರ್ಣ ವಿಚಾರಣೆ ನಡೆಯಲಿದ್ದು, ಶೀಘ್ರ ತನಿಖೆ ಪೂರ್ಣಗೊಳಿಸಲು ಇದು ಸಹಕಾರಿಯಾಗುತ್ತದೆ 'ಎಂದು ಅಭಿಪ್ರಾಯಪಟ್ಟಿದ್ದಾರೆ.
ಅಲ್ಲದೆ ಪ್ರಕರಣದ ವಿಚಾರಣೆಯ ನೇತೃತ್ವವನ್ನು ನ್ಯಾ. ಎ.ಆರ್.ಡೇವ್ ಮತ್ತು ವಿಕ್ರಮಜೀತ್ ಸೇನ್ ಅವರಿಗೆ ವಹಿಸಲಾಗಿದೆ. ಪ್ರಕರಣದ ವಿಚಾರಣೆ ಮುಗಿಯುವವರೆಗೂ ಈ
ಇಬ್ಬರು ನ್ಯಾಯಮೂರ್ತಿಗಳೇ ವಿಚಾರಣೆಯನ್ನು ನಡೆಸಲಿದ್ದಾರೆ ಎಂದು ನ್ಯಾಯಾಲಯ ತಿಳಿಸಿದೆ. ಅದರೆ ಸುಪ್ರೀಂಕೋರ್ಟ್ ಸೂಚನೆಗೆ ಇಟಲಿ ಆಕ್ಷೇಪ ವ್ಯಕ್ತಪಡಿಸಿದ್ದು, ಎನ್ಐಎಗೆ ತನ್ನ ದೇಶದ ಸಿಬ್ಬಂದಿಗಳನ್ನು ವಿಚಾರಣೆ ನಡೆಸುವ ಅಧಿಕಾರವಿಲ್ಲ. ಇದು 2 ರಾಷ್ಟ್ರಗಳ ನಡುವಿನ ವಿಚಾರವಾಗಿದ್ದು, ಸಿಬಿಐ ಅಥವಾ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿಯೇ ವಿಚಾರಣೆ ನಡೆಸಬೇಕು ಎಂದು ಇಟಲಿ ಒತ್ತಾಯಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


