ಎನ್‌ಡಿಎ ಬಲಿಷ್ಠವಾಗಿದೆ: ನಿತೀಶ್ ಕುಮಾರ್
ಪಾಟ್ನಾ: ಬಿಜೆಪಿ ಮತ್ತು ಜೆಡಿ(ಯು) ಪಕ್ಷಗಳ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಬಲಿಷ್ಠವಾಗಿದ್ದು, ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹೇಳಿದ್ದಾರೆ.
ಮುಂಬರುವ 2014ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಬಿಜೆಪಿ ಮತ್ತು ಜೆಡಿ(ಯು) ಪಕ್ಷಗಳಲ್ಲಿ ಉಂಟಾಗಿದ್ದ ಬಿಕ್ಕಟ್ಟು ಶಮನವಾದಂತೆ ಕಾಣುತ್ತಿದೆ. ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಿದ್ದಕ್ಕಾಗಿ ಬಿಜೆಪಿ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಇಂದು ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದಾರೆ.
ಬಿಹಾರದಲ್ಲಿ ಖಾಲಿ ಉಳಿದಿರುವ 3 ಶಾಸಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಆಗಮಿಸಿದ್ದ ಅವರು, 'ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಬಲಿಷ್ಠವಾಗಿದ್ದು, ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದೆ. ಕೌನ್ಸಿಲ್ ಚುನಾವಣೆಯಲ್ಲಿ ಉಭಯಪಕ್ಷಗಳು ಸ್ಥಾನಗಳ ಹಂಚಿಕೆ ಮಾಡಿಕೊಂಡಿವೆ. ಚುನಾವಣೆಯಲ್ಲಿ ಸ್ಪಷ್ಟಬಹುಮತ ಗಳಿಸುವ ಮೂಲಕ ಬಿಹಾರದ ಅಭಿವೃದ್ಧಿಗಾಗಿ ಶ್ರಮಿಸುತ್ತೇವೆ' ಎಂದು ಹೇಳಿದರು. ಆದರೆ ಮುಂಬರುವ ಲೋಕಸಭಾ ಚುನಾವಣೆಯ ಎನ್‌ಡಿಎ ಪ್ರಧಾನಿ ಅಭ್ಯರ್ಥಿ ಆಯ್ಕೆಯ ಕುರಿತು ಮಾತನಾಡಲು ನಿತೀಶ್ ನಿರಾಕರಿಸಿದರು.
2014ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿ ಅಯ್ಕೆ ವಿಚಾರವಾಗಿ ಬಿಜೆಪಿಯೊಂದಿಗೆ ತಗಾದೆ ತೆಗೆದಿದ್ದ ನಿತೀಶ್ ಕುಮಾರ್, ಬಿಜೆಪಿ ನಾಯಕರ ವಿರುದ್ಧ ಟೀಕಾ ಪ್ರಹಾರವನ್ನೇ ನಡೆಸಿದ್ದರು. ಮೋದಿ ಅವರನ್ನು ಪರೋಕ್ಷವಾಗಿ ಗುರಿಯಾಗಿಸಿಕೊಂಡಿದ್ದ ನಿತೀಶ್, ಸಭೆ ಸಮಾರಂಭಗಳಲ್ಲಿ ಪದೇ ಪದೇ ಗೋಧ್ರಾ ನರಮೇಧವನ್ನು ಉಲ್ಲೇಖಿಸಿ ಟೀಕಿಸುತ್ತಿದ್ದರು. ನಿತೀಶ್ ವರ್ತನೆಗೆ ಬಿಹಾರ ಬಿಜೆಪಿ ಘಟಕ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಅಲ್ಲದೆ ಸ್ವತಃ ಬಿಹಾರದ ಉಪ ಮುಖ್ಯಮಂತ್ರಿಯಾಗಿರುವ ಬಿಜೆಪಿ ನಾಯಕ ಸುಶೀಲ್ ಕುಮಾರ್ ಅವರೇ, ನಿತೀಶ್ ವಿರುದ್ಧ ಸಾರ್ವಜನಿಕವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

