ಈಗಿನ ಸುದ್ದಿ

ಸಂಕೇಶ್ವರ್ 'ಚೀಟಿ' ಆರೋಪಕ್ಕೆ ಬಿಎಸ್‌ವೈ ಸಮರ್ಥನೆ

ಸಂಕೇಶ್ವರ್ 'ಚೀಟಿ' ಆರೋಪಕ್ಕೆ ಬಿಎಸ್‌ವೈ ಸಮರ್ಥನೆ
Published On :

ಶಿವಮೊಗ್ಗ: ಕೆಜೆಪಿ ಮುಖಂಡ ಹಾಗೂ ಉದ್ಯಮಿ ವಿಜಯ್ ಸಂಕೇಶ್ವರ್ ಅವರು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಅವರ ವಿರುದ್ಧ ಮಾಡಿದ್ದ ಚೀಟಿ ವ್ಯವಹಾರ ಆರೋಪವನ್ನು ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಸಮರ್ಥಿಸಿಕೊಂಡಿದ್ದಾರೆ.

ಸದಾನಂದಗೌಡ ಹಾಗೂ ಉಪ ಮುಖ್ಯಮಂತ್ರಿ ಆರ್.ಅಶೋಕ್ ವಿರುದ್ಧದ ಆರೋಪವನ್ನು ಸಮರ್ಥಿಸಿಕೊಂಡ ಬಿಎಸ್‌ವೈ, ಆ ಚೀಟಿಯಲ್ಲಿರುವುದು ಡೀವಿ ಅವರ ಕೈ ಬರಹವೇ ಎಂದು ಹೇಳಿದ್ದಾರೆ. ಅಲ್ಲದೆ ಒಂದು ವೇಳೆ ಅವರು ಅದು ತಮ್ಮ ಬರಹ ಅಲ್ಲ ಎಂದು ಸಾಬೀತು ಮಾಡಿದರೆ ತಾವು ರಾಜಕೀಯ ನಿವೃತ್ತಿ ಪಡೆಯುವುದಾಗಿ ಸವಾಲು ಹಾಕಿದ್ದಾರೆ.

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಬಿಎಸ್‌ವೈ, ಬಿಜೆಪಿ ಹಗರಣಗಳು ಈಗ ಒಂದೊಂದಾಗಿ ಹೊರ ಬರುತ್ತಿವೆ ಎಂದರು.

ನಿನ್ನೆ ಹುಬ್ಬಳ್ಳಿಯಲ್ಲಿ ಮಾತನಾಡಿದ್ದ ಸಂಕೇಶ್ವರ್, ಸದಾನಂದಗೌಡ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಚೀಟಿ ವ್ಯವಹಾರದ ಮೂಲಕ 5 ಕೋಟಿ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ ಈ ಸಂಬಂಧ ಅಂದಿನ ಗೃಹ ಸಚಿವ ಆರ್.ಅಶೋಕ್ ಅವರಿಗೆ ಡೀವಿ  ಸ್ವಹಸ್ತಾಕ್ಷರದಲ್ಲಿ ಬರೆದು ಸಹಿ ಮಾಡಿದ ಚೀಟಿಯಲ್ಲಿ, "ಈಗಾಗಲೇ ತಮ್ಮ ಬಳಿ ಚರ್ಚಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರಿಗೆ 5 ಕೋಟಿ ಹಣ ನೀಡಿ' ಎಂದು ಸೂಚಿಸಿದ್ದಾರೆ. ಹೀಗಾಗಿ ಡೀವಿ ಸೂಚನೆಯಂತೆ ಅಶೋಕ ಅವರು ಕಿಕ್‌ಬ್ಯಾಕ್ ಪಡೆದು ಅಂದು ರಾಜ್ಯಾಧ್ಯಕ್ಷರಾಗಿದ್ದ ಕೆ.ಎಸ್. ಈಶ್ವರಪ್ಪ ಅವರಿಗೆ ಹಣ ನೀಡಿದ್ದಾರೆ.  ಎಂದು ಆರೋಪಿಸಿದ್ದರು.

ಆದರೆ ಈ ಆರೋಪವನ್ನು ತಳ್ಳಿ ಹಾಕಿರುವ ಸದಾನಂದಗೌಡ, ಈ ಆರೋಪ ನಿರಾಧಾರ, ತನಿಖೆ ಎದುರಿಸಲು ಸಿದ್ಧ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.