ಈಗಿನ ಸುದ್ದಿ

ದೆಹಲಿ: 6ರ ಹರೆಯದ ಬಾಲಕಿ ಮೇಲೆ ಅತ್ಯಾಚಾರ

Published On :

ನವದೆಹಲಿ: ಈಗಾಗಲೇ ರೇಪ್ ಸಿಟಿ ಎಂದು ಕುಖ್ಯಾತಿಗೀಡಾಗಿರುವ ದೆಹಲಿಯಲ್ಲಿ ಇದೀಗ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದೆ. ಇಲ್ಲಿನ ಬದಾರ್‌ಪುರ್ ಎಂಬಲ್ಲಿ 6ರ ಹರೆಯದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಸಾರ್ವಜನಿಕ ಶೌಚಾಲಯದ ಬಳಿ ಗಂಭೀರ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದಳು.

ಬಾಲಕಿಯ ಮೈಮೇಲೆ ತುಂಬಾ ಗಾಯಗಳಿದ್ದು, ಆಕೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಬಾಲಕಿ ಮೂತ್ರವಿಸರ್ಜನೆ ಮಾಡಲು ಹೊರಗೆ ಹೋದ ಸಂದರ್ಭದಲ್ಲಿ ಆ ಘಟನೆ ನಡೆದಿದೆ ಎಂದು ಬಾಲಕಿಯ ಪಾಲಕರು ಹೇಳಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಸಾರ್ವಜನಿಕ ಶೌಚಾಲಯದ ಬಳಿ ಬಿದ್ದಿದ್ದ ಬಾಲಕಿಯನ್ನು ಕಂಡ ದಾರಿಹೋಕರು  ಆಲ್ ಇಂಡಿಯಾ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸಯನ್ಸ್ ಆಸ್ಪತ್ರೆಗೆ ದಾಖಲಿಸಿದ್ದರು.

ಆಕೆಯ ಕುತ್ತಿಗೆಯಲ್ಲಿ  ಹಲವಾರು ಗಾಯಗಳಿದ್ದು, ಆಕೆ ಪತ್ತೆಯಾಗುವಾಗ ವಿವಸ್ತ್ರಳಾಗಿದ್ದಳು ಎಂದು ಆಕೆಯ ಸಂಬಂಧಿಯೊಬ್ಬರು ಹೇಳಿದ್ದಾರೆ.

ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 22 ಮಂದಿಯನ್ನು ವಿಚಾರಣೆಗೊಳಪಡಿಸಿದ್ದು, ಸಾರ್ವಜನಿಕ ಶೌಚಾಲಯದ ಗುತ್ತಿಗೆದಾರನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.