ಈಗಿನ ಸುದ್ದಿ

ಸರಣಿ ಬಾಂಬ್ ಸ್ಫೋಟ: 9 ಸಾವು

Published On :

ಇಸ್ಲಾಮಾಬಾದ್: ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿದ ಪರಿಣಾಮ 9 ಜನರು ಸಾವನ್ನಪ್ಪಿದ್ದು, 30 ಜನ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಫರ್ಧಿಸುತ್ತಿರುವ ಅಭ್ಯರ್ಥಿಗಳ ಕಛೇರಿಗಳ ಮೇಲೆ ಉಗ್ರರು ದಾಳಿ ಮಾಡಿದ್ದಾರೆ.

ಮೊದಲಿಗೆ ಖೈಬರ್-ಪಾಕ್ತುಂಕ್ವ ವಲಯದ ಕೋಹತ್ ಜಿಲ್ಲೆಯ ಚುನಾವಣಾ ಕಛೇರಿ ಮುಂದೆ ಬಾಂಬ್ ಸ್ಫೋಟಿಸಿದ ಪರಿಣಾಮ 6ಜನರು ಸಾವನ್ನಪ್ಪಿದ್ದು, 21 ಜನರು ಗಾಯಗೊಂಡಿದ್ದಾರೆ. ವ್ಯಾಪಕವಾಗಿ ಬಾಂಬ್ ಸ್ಫೋಟಿಸಿದ್ದು, ಅಲ್ಲೇ ಹತ್ತಿರದಲ್ಲಿದ್ದ ಸ್ವತಂತ್ರ ಅಭ್ಯರ್ಥಿ ಸಯ್ಯದ್ ನೂರ್ ಅಕ್ಬರ್ ಅವರ ಕಚೇರಿ ಧ್ವಂಸಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಾದ ಕೆಲವೇ ಗಂಟೆಗಳ ನಂತರ ಮಾಖ್‌ಸೂದಬಾದ್‌ನಲ್ಲಿ ಬಾಂಬ್ ಸ್ಫೋಟಿಸಿದ್ದು, 3 ಜನರು ಮೃತಪಟ್ಟಿದ್ದು, ಮಕ್ಕಳು ಸೇರಿದಂತೆ 10 ಜನರು ಗಾಯಗೊಂಡಿದ್ದಾರೆ.

ಚುನಾವಣೆ ಕಣಕ್ಕಿಳಿದಿರುವ ಸ್ವತಂತ್ರ ಅಭ್ಯರ್ಥಿ ನಾಸಿರ್ ಖಾನ್ ಅಫ್ರಿದಿ ಅವರನ್ನು ಗುರಿಯಾಗಿಟ್ಟುಕೊಂಡು ಅವರ ಕಛೇರಿ ಮೇಲೆ ಉಗ್ರರು ದಾಳಿ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ತಾಲಿಬಾನ್ ಮತ್ತು ಇತರೆ ಉಗ್ರರ ಬೆದರಿಕೆಗೆ ಹೆದರಿ ಚುನಾವಣಾ ಅಭ್ಯರ್ಥಿಗಳು ಪ್ರಚಾರ ಮಾಡಲು ಹಿಂಜರಿಯುತ್ತಿದ್ದಾರೆ. ಬುಡಕಟ್ಟು ವಲಯಗಳಲ್ಲಿ ಪ್ರಚಾರ ಮಾಡಲು ಅಭ್ಯರ್ಥಿಗಳಿಗೆ ಕಷ್ಟಕರವಾಗಿದ್ದು, ಪ್ರಾಣ ಭಯ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.