ಈಗಿನ ಸುದ್ದಿ

ಶಾಸಕರ ಭವನದಿಂದ ಜಿಗಿದು ಶಾಸಕರ ಆಪ್ತ ಆತ್ಮಹತ್ಯೆ

Published On :

ಬೆಂಗಳೂರು: ಶಾಸಕರ ಭವನದ ಕಟ್ಟಡದ ಮೇಲಿನಿಂದ ಜಿಗಿದು ಶಾಸರೊಬ್ಬರ ಆಪ್ತ ಸಹಾಯಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಆತ್ಮಹತ್ಯೆಗೆ ಪ್ರೇಮ ವೈಫಲ್ಯವೇ ಕಾರಣ ಎಂದು ತಿಳಿದು ಬಂದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಗೋವಿಂದಗೌಡ ಎಂದು ಗುರುತಿಸಲಾಗಿದ್ದು, ಈತ ಗುಲ್ಬರ್ಗಾ ಜಿಲ್ಲೆಯ ಜೇವರ್ಗಿ ಕ್ಷೇತ್ರದ ಬಿಜೆಪಿ ಶಾಸಕ ದೊಡ್ಡಪ್ಪಗೌಡ ನರಿಬೋಳ್ ಅವರ ಆಪ್ತ ಸಹಾಯಕರಾಗಿದ್ದು, ಸುಮಾರು ಐದು ವರ್ಷಗಳಿಂದ ಅವರ ಬಳಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಗೋವಿಂದಗೌಡ(24) ಇಂದು ಬೆಳಗ್ಗೆ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಗೋವಿಂದಗೌಡನಿಗೆ ಅಲ್ಲಿಯ ನರ್ಸ್ ಒಬ್ಬಳ ಮೇಲೆ ಪ್ರೇಮ ಅಂಕುರಿಸಿದೆ. ಆದರೆ ಈತನ ಪ್ರೀತಿಯನ್ನು ನರ್ಸ್ ನಿರಾಕರಿಸಿದ್ದು, ಕಾರಣ ಇಂದು ಆತ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನರ್ಸ್‌ಳನ್ನು ಅತಿಯಾಗಿ ಪ್ರೀತಿಸುತ್ತಿದ್ದಂತ ಗೋವಿಂದಗೌಡ ತನ್ನ ಕೈ ಹಾಗೂ ಎದೆಯ ಮೇಲೆ ಆಕೆಯ ಹೆಸರು ಬರೆದುಕೊಂಡಿದ್ದ ಎಂದು ಸ್ವತಃ ಶಾಸಕ ದೊಡ್ಡಪ್ಪಗೌಡ ನರಿಬೋಳ್ ಅವರೇ ತಿಳಿಸಿದ್ದಾರೆ.

ಚುನಾವಣಾ ಪ್ರಚಾರ ನಿಮಿತ್ತ ಸ್ವಕ್ಷೇತ್ರ ಜೇವರ್ಗಿಯಲ್ಲಿರುವ ಶಾಸಕ ನರಿಬೋಳ್ ಅವರು ತಮ್ಮ ಆಪ್ತ ಸಹಾಯಕನ ಆತ್ಮಹತ್ಯೆ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಆತ ತಮ್ಮ ಬಳಿ ಉತ್ತಮವಾಗಿ ಕೆಲಸ ಮಾಡುತ್ತಿದ್ದ, ಆದರೆ ತಾನು ಅತಿಯಾಗಿ ಪ್ರೀತಿಸುತ್ತಿದ್ದ ಹುಡುಗಿ ತನ್ನ ಪ್ರೀತಿಯನ್ನು ನಿರಾಕರಿಸಿದ್ದಕ್ಕಾಗಿ ಈ ಹಿಂದೆಯೂ ಒಂದು ಬಾರಿ ನಿದ್ರೆ ಮಾತ್ರಿ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.