ಚುನಾವಣೆ ಎಫೆಕ್ಟ್, 'ಎಲೆಕ್ಷನ್' ಸದ್ಯಕ್ಕಿಲ್ಲ!

ಬೆಂಗಳೂರು: ರಾಮು ನಿರ್ಮಾಣದ ಹಾಗೂ ಮಾಲಾಶ್ರೀ ಅಭಿನಯದ 'ಎಲೆಕ್ಷನ್' ಚಿತ್ರಕ್ಕೂ ಚುನಾವಣೆಯ ಬಿಸಿ ತಟ್ಟಿದೆ. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 'ಎಲೆಕ್ಷನ್' ಚಿತ್ರ ಬಿಡುಗಡೆಗೆ ಸೆನ್ಸಾರ್ ಮಂಡಳಿ ಮಂಗಳವಾರ ನಿರಾಕರಿಸಿದೆ.
ಚುನಾವಣೆ ಸಂದರ್ಭದಲ್ಲಿ 'ಎಲೆಕ್ಷನ್' ತೆರೆಕಂಡರೆ ಆ ಚಿತ್ರ ನೇರವಾಗಿ ಜನರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಚಿತ್ರದಲ್ಲಿ ರಾಜಕೀಯ ಪಕ್ಷಗಳನ್ನು ಹೋಲುವ ಸನ್ನಿವೇಶಗಳು ಇರುವ ಹಿನ್ನೆಲೆಯಲ್ಲಿ ಸೆನ್ಸಾರ್ ಮಂಡಳಿ ಅನುಮತಿ ನೀಡಲು ನಿರಾಕರಿಸಿ, ಚಿತ್ರವನ್ನು ರಿವೈಸಿಂಗ್ ಕಮಿಟಿಗೆ ರವಾನಿಸಿದೆ.
ಓಂ ಪ್ರಕಾಶ್ ರಾವ್ ನಿರ್ದೇಶನದ ಈ ಚಿತ್ರದಲ್ಲಿ ಮಾಲಾಶ್ರೀ ಅವರು ಮುಖ್ಯ ಚುನಾವಣಾ ಆಯುಕ್ತರ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ನಿರ್ಮಾಪಕ ರಾಮು ಅವರು, ಚುನಾವಣೆಯನ್ನೇ ಗಮನದಲ್ಲಿಟ್ಟುಕೊಂಡು ಒಳ್ಳೆಯ ಚಿತ್ರ ಮಾಡಿದ್ದೇವು. ಈ ಸಂದರ್ಭದಲ್ಲಿ ಚಿತ್ರ ಬಿಡುಗಡೆಯಾಗಿದ್ದರೆ, ಕೋಟಿ ಕೋಟಿ ಹಣ ಲೂಟಿ ಮಾಡುವುದೇ ರಾಜಕೀಯ ಎನ್ನುವವರಿಗೆ ಒಂದು ಒಳ್ಳೆಯ ಸಂದೇಶ ಇತ್ತು. ಆದರೆ ಚುನಾವಣೆ ಮುಗಿಯುವವರೆಗೆ ಅನುಮತಿ ನೀಡುವುದಿಲ್ಲ ಎಂದು ಸೆನ್ಸಾರ್ ಮಂಡಳಿ ಹೇಳಿರುವುದರಿಂದ ತಮ್ಮ ಉದ್ದೇಶ ಈಡೇರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


