ಈಗಿನ ಸುದ್ದಿ

ಸರಬ್ಜಿತ್ ಮೆದುಳು ನಿಷ್ಕ್ರಿಯ: ಭಾರತಕ್ಕೆ ಸಹೋದರಿ ವಾಪಸ್

ಸರಬ್ಜಿತ್ ಮೆದುಳು ನಿಷ್ಕ್ರಿಯ: ಭಾರತಕ್ಕೆ ಸಹೋದರಿ ವಾಪಸ್
Published On :

ಇಸ್ಲಾಮಾಬಾದ್: ಸಹ ಖೈದಿಗಳಿಂದ ಹಲ್ಲೆಗೊಳಗಾಗಿದ್ದ ಭಾರತೀಯ ಮೂಲದ ಸರಬ್ಜಿತ್ ಸಿಂಗ್ ಅವರ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡಿದ್ದು, ಅವರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ.

ಪಾಕಿಸ್ತಾನದ ಲಾಹೋರ್‌ನ ಕೋಟ್ ಲಕಪತ್ ಜೈಲಿನ ಸಹ ಖೈದಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಭಾರತೀಯ ಮೂಲದ ಸರಬ್ಜಿತ್ ಸಿಂಗ್ ಅವರ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದು, ಅವರ ಮೆದುಳು ಬಹುತೇಕ ನಿರ್ಜೀವವಾಗಿದೆ ಎಂದು ಜಿನ್ನಾ ಆಸ್ಪತ್ರೆಯ ಮೂಲಗಳು ತಿಳಿಸಿವೆ. ತೀವ್ರ ರಕ್ತ ಸ್ರಾವ ಮತ್ತು ರಕ್ತದ ಹೆಪ್ಪುಗಟ್ಟುವಿಕೆಯಿಂದ ಕೋಮಾ ಸ್ಥಿತಿ ತಲುಪಿದ್ದ ಸರಬ್ಜಿತ್‌ಗೆ, ವೆಂಟಿಲೇಟರ್ ಮೂಲಕ ಆಮ್ಲಜನಕವನ್ನು ಪೂರೈಸಲಾಗುತ್ತಿದೆ. ಆದರೆ ಆಸ್ಪತ್ರೆಯ ವೈದ್ಯರು ಸರಬ್ಜಿತ್ ಬದುಕುಳಿಯುವ ಸಾಧ್ಯತೆ ತೀರಾ ಕಡಿಮೆ ಎಂದು ಹೇಳಿದ್ದಾರೆ.

ದಲಬೀರ್ ಖೌರ್ ವಾಪಸ್
ಸರಬ್ಜಿತ್ ಸಿಂಗ್ ಸಹೋದರಿ ದಲಬೀರ್ ಖೌರ್ ಅವರು ಇಂದು ಮಧ್ಯಾಹ್ನ ಭಾರತಕ್ಕೆ ವಾಪಸಾಗಲಿದ್ದಾರೆ. ಈಗಾಗಲೇ ಆಸ್ಪತ್ರೆ ತೊರೆದಿರುವ ಅವರು, ಮಧ್ಯಾಹ್ನ 2.30ರ ಹೊತ್ತಿಗೆ ವಾಘಾ ಗಡಿಯ ಮೂಲಕ ಭಾರತಕ್ಕೆ ವಾಪಸಾಗಲಿದ್ದಾರೆ. ಆಸ್ಪತ್ರೆಯ ಆವರಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಆಯೋಗದ ಉಪಾಧ್ಯಕ್ಷ ರಾಜ್‌ಕುಮಾರ್ ವೀರ್ಕಾ ಅವರನ್ನು ಭೇಟಿ ಮಾಡಿದ್ದ ದಲಬೀರ್ ಖೌರ್, ಸರಬ್ಜಿತ್ ಆರೋಗ್ಯ ಪರಿಸ್ಥಿತಿಯನ್ನು ಅವರಿಗೆ ತಿಳಿಸಿದ್ದಾರೆ. ಸರಬ್ಜಿತ್ ಅವರ ಮೆದುಳು ನಿಷ್ಕ್ರಿಯಗೊಂಡ ವಿಷಯವನ್ನು ರಾಜ್‌ಕುಮಾರ್ ವೀರ್ಕಾ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಿ, ವಿಷಾಧ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಸರಬ್ಜಿತ್ ಆರೋಗ್ಯದ ಸ್ಥಿತಿಗತಿ ವರದಿಯನ್ನು ಪಡೆದಿರುವ ಭಾರತೀಯ ರಾಯಭಾರ ಕಚೇರಿ, ಸರಬ್ಜಿತ್ ಅವರನ್ನು ಚಿಕಿತ್ಸೆಗಾಗಿ ಭಾರತಕ್ಕೆ ಕಳುಹಿಸಿ ಕೊಡುವಂತೆ ಪಾಕ್ ಸರ್ಕಾರದ ಮೇಲೆ ಮತ್ತೊಮ್ಮೆ ಒತ್ತಡಹೇರಿದೆ. ಅಲ್ಲದೆ ಸರಬ್ಜಿತ್ ಅವರ ಹಲ್ಲೆ ಪ್ರಕರಣವನ್ನು ಕೂಲಂಕುಷವಾಗಿ ತನಿಖೆಗೊಳಪಡಿಸಿ, ತಪ್ಪಿತಸ್ಥರನ್ನು ಕಠಿಣವಾಗಿ ಶಿಕ್ಷಿಸಬೇಕು ಎಂದು ಆಗ್ರಹಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.