ಈಗಿನ ಸುದ್ದಿ

ಸಿಖ್ ನರಮೇಧ: ಸಜ್ಜನ್‌ಕುಮಾರ್ ದೋಷಮುಕ್ತ

ಸಿಖ್ ನರಮೇಧ: ಸಜ್ಜನ್‌ಕುಮಾರ್ ದೋಷಮುಕ್ತ
Published On :

ನವದೆಹಲಿ: 1984ರ ಸಿಖ್ ನರಮೇಧ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಅವರನ್ನು ನ್ಯಾಯಾಲಯ ದೋಷಮುಕ್ತ ಎಂದು ತೀರ್ಪು ನೀಡಿದೆ.

1984ರ ಸಿಖ್ ನರಮೇಧದ ದೆಹಲಿ ಕಂಟೋನ್ಮೆಂಟ್ ಬಳಿ ನಡೆದ ಹಿಂಸಾಚಾರದಲ್ಲಿ ಸಜ್ಜನ್ ಕುಮಾರ್ ಅವರ ಪಾತ್ರವಿಲ್ಲ ಎಂದು ದೆಹಲಿಯ ಕರ್ಕರ್ ಡೂಮ ನ್ಯಾಯಾಲಯ ಅಭಿಪ್ರಾಯಪಟ್ಟಿದ್ದು, ಪ್ರಕರಣದಿಂದ ಅವರನ್ನು ಖುಲಾಸೆಗೋಳಿಸಿದೆ. ಸಜ್ಜನ್ ಕುಮಾರ್ ಅವರನ್ನು ನ್ಯಾಯಾಲಯ ದೋಷ ಮುಕ್ತರೆಂದು ತೀರ್ಪು ನೀಡುತ್ತಿದ್ದಂತೆಯೇ ಸಿಖ್ ಧರ್ಮೀಯರ ಆಕ್ರೋಶ ಸ್ಫೋಟಗೊಂಡಿದೆ.

ನ್ಯಾಯಾಲಯದ ಹೊರಗಡೆ ಅಪಾರ ಪ್ರಮಾಣದಲ್ಲಿ ನೆರೆದಿರುವ ಸಿಖ್ಖರು, ತೀರ್ಪಿನ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಸಿಖ್ಖರ ಧಾರ್ಮಿಕ ಭಾವನೆಗೆ ಧಕ್ಕೆ ತಂದ, ಸಜ್ಜನ್ ಕುಮಾರ್ ಅವರನ್ನು ಶಿಕ್ಷಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ.

ಅಂತೆಯೇ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರ ವಿರುದ್ಧವೂ ಆಕ್ರೋಶ ವ್ಯಕ್ತವಾಗುತ್ತಿದ್ದು, ನ್ಯಾಯಾಲಯದ ಹೊರಗೆ ಸಿಖ್ಖ್ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಿದ್ದಾರೆ.

ನ್ಯಾಯಾಲಯದಲ್ಲಿ ತೀರ್ಪು ಪ್ರಕಟಿಸಿದ ನ್ಯಾಯಧೀಶರ ಮೇಲೆಯೇ ವ್ಯಕ್ತಿಯೊಬ್ಬ ಶೂ ಎಸೆದಿದ್ದಾನೆ. ಶೂ ಎಸೆದ ವ್ಯಕ್ತಿ ಕರ್ನೈಲ್ ಸಿಂಗ್ ಎಂದು ತಿಳಿದು ಬಂದಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.

ನ್ಯಾಯಾಲಯದ ಆವರಣದಲ್ಲಿ ಆರ್‌ಎಎಫ್ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ದೆಹಲಿಯ ಕರ್ಕರ್ ಡೂಮ ನ್ಯಾಯಾಲಯದ ಆವರಣದಲ್ಲಿ ಪ್ರಕ್ಷುಬ್ದ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಪರಿಸ್ಥಿತಿ ನಿಭಾಯಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

1984ರಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಹತ್ಯೆಯ ನಂತರ ನಡೆದಿದ್ದ ಸಿಖ್ ನರಮೇಧ ಪ್ರಕರಣದಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ಸಜ್ಜನ್ ಕುಮಾರ್ ಅವರು ಪ್ರಮುಖ ಆರೋಪಿಯಾಗಿದ್ದರು. ಸಜ್ಜನ್ ಕುಮಾರ್ ಅವರು ದೆಹಲಿಯ ಕಂಟೋನ್ಮೆಂಟ್ ಬಳಿ ಸಿಖ್ಖ್ ಧರ್ಮೀಯರ ಮೇಲೆ ತಮ್ಮ ಬೆಂಬಲಿಗರಿಂದ ದಾಳಿ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಅಲ್ಲದೆ ಹಿಂಸಾಚಾರಕ್ಕೆ ಬೆಂಬಲ ನೀಡಿದ ಪ್ರಕರಣ ಸೇರಿದಂತೆ ಇನ್ನೂ 2 ಪ್ರಮುಖ ಪ್ರಕಣಗಳು ಅವರ ಮೇಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.