ಈಗಿನ ಸುದ್ದಿ

ಸರಬ್ಜಿತ್‌ಗೆ ಹೊರದೇಶದಲ್ಲಿ ಚಿಕಿತ್ಸೆ ಕೊಡಿಸಿ: ಭಾರತ

ಸರಬ್ಜಿತ್‌ಗೆ ಹೊರದೇಶದಲ್ಲಿ ಚಿಕಿತ್ಸೆ ಕೊಡಿಸಿ: ಭಾರತ
Published On :

ನವದೆಹಲಿ: ಸಹ ಖೈದಿಗಳಿಂದ ಹಲ್ಲೆಗೊಳಗಾಗಿ ಗಂಭೀರ ಸ್ಥಿತಿಯಲ್ಲಿರುವ ಸರಬ್ಜಿತ್ ಸಿಂಗ್ ಅವರನ್ನು ಕೂಡಲೇ ಚಿಕಿತ್ಸೆಗಾಗಿ ಹೊರದೇಶಕ್ಕೆ ಕಳುಹಿಸಿ ಕೊಡಿ ಎಂದು ಭಾರತ ಸರ್ಕಾರ ಪಾಕಿಸ್ತಾನದ ಬಳಿ ಮನವಿ ಮಾಡಿದೆ.

ಇಂದು ಪಾಕಿಸ್ತಾನದ ವಿದೇಶಾಂಗ ಇಲಾಖೆಯ ಬಳಿ ಮನವಿ ಮಾಡಿರುವ ಭಾರತ ಸರ್ಕಾರ, ಸರಬ್ಜಿತ್‌ರನ್ನು ಭಾರತಕ್ಕೆ ಕಳುಹಿಸಲು ಕಾನೂನು ತೊಡಕಿದ್ದರೆ ಹೊರದೇಶದಲ್ಲಿ ಚಿಕಿತ್ಸೆ ಕೊಡಿಸಿ ಎಂದು ಮನವಿ ಮಾಡಿದೆ.

ವಿದೇಶಾಂಗ ಇಲಾಖೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, 'ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ಪಾಕಿಸ್ತಾನ ವಿದೇಶಾಂಗ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ಭೇಟಿ ವೇಳೆ ಭಾರತೀಯ ಮೂಲದ ಸರಬ್ಜಿತ್ ಸಿಂಗ್ ಅವರನ್ನು ಸಹಾನುಭೂತಿಯ ಆಧಾರದ ಮೇಲೆ ಬಿಡುಗಡೆ ಮಾಡಬೇಕು ಮತ್ತು ಭಾರತದಲ್ಲಿ ಚಿಕಿತ್ಸೆ ನೀಡಲು ಕಾನೂನು ಅಡ್ಡಿಯಾದರೆ, ಅವರಿಗೆ ವಿದೇಶದಲ್ಲಿ ಸೂಕ್ತ ಚಿಕಿತ್ಸೆ ಕೊಡಿಸಬೇಕು' ಎಂದು ಭಾರತ ಮನವಿ ಮಾಡಿದೆ.

ಅಂತೆಯೇ ಸರಬ್ಜಿತ್ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು, ಇಂತಹ ಸಂದರ್ಭದಲ್ಲಿ ಪಾಕಿಸ್ತಾನ ಕಾನೂನು ಮತ್ತು ಅಧಿಕಾರಶಾಹಿ ಧೋರಣೆ ಅನುಸರಿಸುವುದು ಸರಿಯಲ್ಲ ಎಂದು ಭಾರತ ಕಿಡಿಕಾರಿದೆ.

ಲಾಹೋರ್‌ನ ಜಿನ್ನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸರಬ್ಜಿತ್ ಸಿಂಗ್ ಅವರ ಆರೋಗ್ಯ ಪರಿಸ್ಥಿತಿ ದಿನೇ ದಿನೇ ಗಂಭೀರವಾಗುತ್ತಿದ್ದು, ಇಂದು ಅವರು ಹೊರಬರಲಾಗದ ಕೋಮಾ ಸ್ಥಿತಿಗೆ ಜಾರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.